ವಿಜಯಸಾಕ್ಷಿ ಸುದ್ದಿ, ಗದಗ
ಕೊರೊನಾ ಸೋಂಕು ತಡೆಗಟ್ಟಲು ಸರಕಾರ ಕಟ್ಟುನಿಟ್ಟಿನ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಕೇವಲ ಅಗತ್ಯದ ವಸ್ತುಗಳ ಮಾರಾಟ ಹಾಗೂ ಖರೀದಿಸಲು ಮಾತ್ರ ಅವಕಾಶ ಮಾಡಿಕೊಟ್ಟಿದೆ. ಆದರೆ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಬಟ್ಟೆ ವ್ಯಾಪಾರಿಯೊಬ್ಬನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಪವನಪುತ್ರ ಶೋ ರೂಮ್ ಮಾಲೀಕ ಹೇಮರಾಜ್ ಅಲಿಯಾಸ್ ಚಂದ್ರು ಕೀಮರಾಜ್ ರಾಜಪುರೋಹಿತ ಎಂಬಾತ ತನ್ನ ಅಂಗಡಿ ತೆರದು ವ್ಯಾಪಾರ ಮಾಡುತ್ತಿದ್ದಾಗ ನರೇಗಲ್ ಠಾಣೆಯ ಪಿಎಸ್ಐ ರಾಘವೇಂದ್ರ ಎಸ್ ಹಾಗೂ ಸಿಬ್ಬಂದಿ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



