ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದವರ ವಿರುದ್ಧದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡಿದೆ. ಸೈಬರ್ ಕ್ರೈಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ತನಿಖೆ ಇದೀಗ ಅಂತಿಮ ಹಂತ ತಲುಪಿದೆ.
ವಿಜಯಲಕ್ಷ್ಮಿಗೆ ಕೆಟ್ಟ ಕಾಮೆಂಟ್ ಮಾಡಿ ಪರಾರಿಯಾಗಿದ್ದವರ ಪೈಕಿ 6 ಮಂದಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಬಂಧಿತರಲ್ಲಿ ನಟ ಸುದೀಪ್ ಅಭಿಮಾನಿಗಳು ಕೂಡ ಸೇರಿರುವುದು ಚರ್ಚೆಗೆ ಕಾರಣವಾಗಿದೆ. ಆಶ್ಚರ್ಯಕರ ಸಂಗತಿ ಎಂದರೆ, ಬಂಧಿತರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಪೆಟ್ರೋಲ್ ಬಂಕ್ ಮ್ಯಾನೇಜರ್ ಕೂಡ ಸೇರಿದ್ದಾರೆ.
60 ದಿನಗಳ ಒಳಗೆ ಚಾರ್ಜ್‌ಶೀಟ್ ಸಲ್ಲಿಸಬೇಕಿರುವ ಕಾನೂನು ಬದ್ಧತೆಯ ಹಿನ್ನೆಲೆಯಲ್ಲಿ, ಪೊಲೀಸರು ಬಂಧಿತರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಉಳಿದ ಆರೋಪಿಗಳು ತಲೆಮರೆಸಿಕೊಂಡಿರುವುದನ್ನೂ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣ ಇದೀಗ ಸೋಷಿಯಲ್ ಮೀಡಿಯಾದ ದುರುಪಯೋಗಕ್ಕೆ ಎಚ್ಚರಿಕೆಯ ಸಂದೇಶವಾಗುತ್ತಿದೆ.



