HomeKarnataka NewsSSLC Result: ರಾಜ್ಯಕ್ಕೆ 7 ಮಂದಿ ಟಾಪರ್ಸ್! 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಇವರೇ...

SSLC Result: ರಾಜ್ಯಕ್ಕೆ 7 ಮಂದಿ ಟಾಪರ್ಸ್! 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಇವರೇ ನೋಡಿ..!

For Dai;y Updates Join Our whatsapp Group

Spread the love

ಬೆಂಗಳೂರು: 2025–26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಕರ್ನಾಟಕ ಶೇ. 94.1 ಪಾಸ್ ಪ್ರಮಾಣದೊಂದಿಗೆ ಹೊಸ ದಾಖಲೆ ನಿರ್ಮಿಸಿದೆ. ಪರೀಕ್ಷೆ ಬರೆದಿದ್ದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಂದಿ ಉತ್ತೀರ್ಣರಾಗಿದ್ದಾರೆ.

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 98.40 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಇನ್ನು ಕಲಬುರಗಿ ಜಿಲ್ಲೆ ಶೇ. 85.06 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಈ ಬಾರಿಯ ವಿಶೇಷವೆಂದರೆ, ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ಅಸಾಧಾರಣ ಸಾಧನೆ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಣವೆಬಿಳಚಿ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿ ಭರತ್ 625ಕ್ಕೆ 625 ಅಂಕ ಪಡೆದಿದ್ದಾರೆ. ಅವರು ಬಿಲ್ಡಿಂಗ್ ಕಾಂಟ್ರಾಕ್ಟರ್ ಗಿರೀಶ್ ರಾವ್ ಹಾಗೂ ಶಿಲ್ಪಾ ದಂಪತಿಯ ಪುತ್ರ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸ್‌ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಜನ್ಯಾ ಕೂಡ ಪೂರ್ಣ ಅಂಕ ಪಡೆದು ಗಮನ ಸೆಳೆದಿದ್ದಾರೆ. ಅವರ ಸಾಧನೆಗೆ ಶಾಲಾ ಆಡಳಿತ ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಶಂಕರ್ ನಾರಾಯಣದ ಮದರ್ ತೆರೆಸಾ ಮೆಮೊರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಂ ಜಿ. ಪೂಜಾರಿ 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲಿ ಮೊದಲ ರ್ಯಾಂಕ್ ಗಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ಸರ್ಕಾರಿ ಶಾಲೆಯ ಪ್ರಾರ್ಥನಾ ಬಿರಾದಾರ್ ಕೂಡ 625ಕ್ಕೆ 625 ಅಂಕ ಪಡೆದು ಗ್ರಾಮೀಣ ವಿದ್ಯಾರ್ಥಿಗಳಿಗೂ ಸಾಧ್ಯತೆ ಇದೆ ಎಂಬುದನ್ನು ತೋರಿಸಿದ್ದಾರೆ.

ಇನ್ನೂ ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್ ಹಾಗೂ ರಾಯಚೂರು ಜಿಲ್ಲೆದ ಸುಖದೇವ್ ಕೂಡ 625ಕ್ಕೆ 625 ಅಂಕ ಪಡೆಯುವ ಮೂಲಕ ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್​​ ಪಡೆದು ಕುಟುಂಬ ಮತ್ತು ಶಾಲೆ ಸೇರಿದಂತೆ ಊರಿಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಕುಟುಂಬ, ಶಾಲೆ ಮತ್ತು ಊರಿನವರು ಸಂತಸ ವ್ಯಕ್ತಪಡಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!