HomeGadag Newsಮೀಸಲು ಅನುದಾನ ಗ್ಯಾರಂಟಿಗೆ ಬಳಕೆ: ಖಂಡನೆ

ಮೀಸಲು ಅನುದಾನ ಗ್ಯಾರಂಟಿಗೆ ಬಳಕೆ: ಖಂಡನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : 2024-25ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಅನುದಾನವನ್ನು ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡು ಸಮುದಾಯವನ್ನು ಅಭಿವೃದ್ಧಿಯಿಂದ ಹಿಂದುಳಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಲಕ್ಕುಂಡಿ ಮಂಡಲದ ಬಿ.ಜೆ.ಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಬಸವರಾಜ ಡಿ.ಮುಳ್ಳಾಳ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸಿದ್ಧರಾಮಯ್ಯ ಸರಕಾರವು ದಲಿತರ ಪರವಾಗಿ ಇದೆ ಎಂದು ಹೇಳುತ್ತಾ ಅವರಿಂದ ಮತ ಪಡೆದು ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿದೆ. ಸಮುದಾಯದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗ ನೀಡುವುದನ್ನು ಬಿಟ್ಟು ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ದುರ್ಬಳಕೆ ಮಾಡುತ್ತಿರುವುದು ಸರಿಯಲ್ಲ.

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ವರ್ಗಾಯಿಸುವ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ದಲಿತ ಸಮುದಾಯ ಹಾಗೂ ಸಂಘಟನೆಗಳೊಂದಿಗೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img