HomeGadag Newsಮುಂಬರುವ ಚುನಾವಣೆಗಳಲ್ಲಿ ಸ್ಪರ್ಧೆ

ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಎಸ್.ಎಸ್. ರಡ್ಡೇರ ಸಮ್ಮುಖದಲ್ಲಿ ಹಾವೇರಿ ಜಿಲ್ಲಾ ಅಧ್ಯಕ್ಷರಾಗಿ ಮಕ್ತುಮ್‌ಸಾಬ ಮುಲ್ಲಾ ಇವರನ್ನು ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಎಸ್. ರಡ್ಡೇರ ಮಾತನಾಡಿ, ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಬೇಸತ್ತು ಜನತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಆದರೆ ರಾಜ್ಯ ಸರ್ಕಾರ ಕಳೆದ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಹಗರಣಗಳಲ್ಲಿ ನಿರತವಾಗಿದೆ. ಪರ್ಯಾಯವಾಗಿ ನಮ್ಮ ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷವು ರಾಜ್ಯಾದ್ಯಂತ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದು, ಮುಂಬರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಶಿಗ್ಗಾಂವ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆೆ ಎಂದು ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ರಾಮನಕೂಪ್ಪ ಮಾತನಾಡಿ, ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ರಾಜ್ಯದಲ್ಲಿ ಕಾನೂನು ವ್ಯವಸ್ಥೆಯ ಹದಗೆಟ್ಟಿದೆ ಮತ್ತು ರಾಜ್ಯದ ಜನತಗೆ ಸುರಕ್ಷತೆಯ ಭೀತಿ ಕಾಡುತ್ತಿದೆ ಎಂದು ಹೇಳಿದರು.

ರಾಜ್ಯ ಉಪಾಧ್ಯಕ್ಷ ಶಿವಾನಂದಯ್ಯ ಹಿರೇಮಠ ಮಾತನಾಡಿದರು. ಪಕ್ಷದ ಗದಗ ತಾಲೂಕಾ ಅಧ್ಯಕ್ಷರಾಗಿ ಆಯ್ಕೆಯಾದ ಗಣೇಶ ಚಲವಾದಿ ಅವರಿಗೆ ಆದೇಶ ಪತ್ರ ನೀಡಲಾಯಿತು.

ರಾಜ್ಯ ಉಪಾಧ್ಯಕ್ಷ ಶಿವಾನಂದಯ್ಯ ಹಿರೇಮಠ, ರಾಜ್ಯ ಕಾರ್ಯದರ್ಶಿ ಯು.ಆರ್. ಭೂಸನೂರಮಠ, ಗದಗ ಜಿಲ್ಲಾ ಮಹಿಳಾ ಅಧ್ಯಕ್ಷೆ ರತ್ನಾ ಪೂಜಾರ್, ಗದಗ ಜಿಲ್ಲಾಧ್ಯಕ್ಷ ಸಚಿನ್ ಮಲ್ಲಾಡದ, ಪ್ರಭಾಕರ ಹೆಬಸೂರ, ಸಣ್ಣಪ್ಪ ರಾಠೂಡ, ಮಹಾದೆವಯ್ಯ ಹಿರೇಮಠ, ಉಮೇಶ್ ಕೋನರೆಡ್ಡಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img