ಗದಗ: ಎರಡು ಸಾರಿಗೆ ಸಂಸ್ಥೆಯ ಬಸ್ ಗಳ ನಡುವೆ ಡಿಕ್ಕಿಯಾಗಿ ಐದು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಕ್ರಾಸ್ ಬಳಿ ನಡೆದಿದೆ. ಗದಗನಿಂದ ಮುಂಡರಗಿ ಪಟ್ಟಣಕ್ಕೆ ಹೋಗುತ್ತಿದ್ದ ಬಸ್ ಹಾಗೂ ಕೊಪ್ಪಳ್ಳದಿಂದ ಗದಗ ಬರುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿದೆ.
ಗದಗನಿಂದ ಮುಂಡರಗಿ ಹೋಗುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯದಿಂದ ರಸ್ತೆ ಕ್ರಾಸ್ ಮಾಡುವಾಗ ಎರಡು ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಇನ್ನೂ ಈ ಅಪಘಾತದಲ್ಲಿ ಐದು ಜನರಿಗೆ ಗಂಭಿರ ಗಾಯಗಳಾಗಿದ್ದು, 20 ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



