ಬೆಂಗಳೂರು: ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಬೈಲ್ ಕಳುವು ಮಾಡುತ್ತಿದ್ದ ಸಹೋದರರ ಬಂಧನ ಮಾಡಿದ್ದಾರೆ.
ಆನಂದ್, ಕಿರಣ್ ಬಂಧಿತ ಆರೋಪಿಗಳಾಗಿದ್ದಾರೆ. ರಸ್ತೆಯಲ್ಲಿ ಓಡಾಡುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಕಿಲಾಡಿಗಳು, ಬೈಕ್‌ನಲ್ಲಿ ಬಂದು ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದರು.
ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿ ವ್ಯಕ್ತಿಯೊಬ್ಬರ ಮೊಬೈಲ್ ಎಗರಿಸಿದ್ದರು. ಕಡಿಮೆ ಬೆಲೆಗೆ ಮೊಬೈಲ್ ಮಾರಾಟ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದರು. ಬಂಧಿತರಿಂದ ವಿವಿಧ ಕಂಪನಿಗಳ 3 ಲಕ್ಷ ಮೌಲ್ಯದ 20 ಮೊಬೈಲ್‌ಗಳನ್ನು ಸೀಜ್ ಮಾಡಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



