HomePolitics Newsಅದ್ದೂರಿ ದಸರಾ ಕಾಂಗ್ರೆಸ್ ಸರ್ಕಾರದದ ಮತ್ತೊಂದು ಹಗರಣಕ್ಕೆ ವೇದಿಕೆ ಆಗದಿರಲಿ: ಆರ್ ಅಶೋಕ್

ಅದ್ದೂರಿ ದಸರಾ ಕಾಂಗ್ರೆಸ್ ಸರ್ಕಾರದದ ಮತ್ತೊಂದು ಹಗರಣಕ್ಕೆ ವೇದಿಕೆ ಆಗದಿರಲಿ: ಆರ್ ಅಶೋಕ್

For Dai;y Updates Join Our whatsapp Group

Spread the love

ಬೆಂಗಳೂರು: ಅದ್ದೂರಿ ದಸರಾ, ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ದೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ದೂರಿ ದಸರಾ, ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ದೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಶ್ರೀ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದು ಅವರು ಹೇಳಿದ್ದಾರೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!