ತುಮಕೂರು: ನಿರಂತರ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಹನಾ (27) ಮೃತ ದುರ್ದೈವಿಯಾಗಿದ್ದು, ಬೆಳಗ್ಗೆ ಸ್ನಾನಕ್ಕೆ ಹಳೆಯ ಮನೆಗೆ ತೆರಳಿದ್ದ ವೇಳೆ ಗೋಡೆ ಕುಸಿದು ಸಹನಾ ಮಣ್ಣಿನಡಿ ಸಿಲುಕಿದ್ದರು.
ಮಣ್ಣಿನಡಿ ಸಿಲುಕಿದ್ದ ಸಹನಾಳನ್ನ ಗ್ರಾಮಸ್ಥರು ರಕ್ಷಣೆ ಮಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಹನಾಳನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



