HomeEntertainmentಹುಟ್ಟುಹಬ್ಬಕ್ಕೂ ಮೊದಲೇ ಜೀವ ಕಳೆದುಕೊಂಡ ನಿರ್ದೇಶಕ ಗುರುಪ್ರಸಾದ್!

ಹುಟ್ಟುಹಬ್ಬಕ್ಕೂ ಮೊದಲೇ ಜೀವ ಕಳೆದುಕೊಂಡ ನಿರ್ದೇಶಕ ಗುರುಪ್ರಸಾದ್!

For Dai;y Updates Join Our whatsapp Group

Spread the love

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಡೈರೆಕ್ಟರ್ ಗುರುಪ್ರಸಾದ್ ಅವರು ಮೂಲತಃ ರಾಮನಗರದವರು. ನವೆಂಬರ್ 02, 1972ರಂದು ಜನಿಸಿದ್ದರು. ಆದರೆ, ಇದೀಗ ಅವರ ಜನ್ಮದಿನಕ್ಕೆ ಮುನ್ನವೇ ಆತ್ಮಹತ್ಯೆ ಶರಣಾಗಿದ್ದಾರೆ. ಈ ಮೂಲಕ ಬದುಕಿನ ಆಟಕ್ಕೆ ಅಂತ್ಯ ಹಾಡಿದ್ದಾರೆ. ಅವರ ಆತ್ಮಹತ್ಯೆಯ ಸುದ್ದಿ ಕುಟುಂಬಕ್ಕೆ, ಆಪ್ತರಿಕೆ ಆಘಾತವುಂಟು ಮಾಡಿದೆ.

1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್‌ರ 100ನೇ ಚಿತ್ರ. 2009 ರಲ್ಲಿ ಇದೇ ಜೋಡಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು.

ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ‘ಡೈರೆಕ್ಟರ್ ಸ್ಪೇಷಲ್’,’ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿ ‘ಮಠ’, ‘ಎದ್ದೇಳು ಮಂಜುನಾಥ’,’ಮೈಲಾರಿ’, ‘ಹುಡುಗರು’,’ಅನಂತು v/s ನುಸ್ರತ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್‌ ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ. ‘ರಂಗನಾಯಕ’ ಸಿನಿಮಾದ ಸೋಲಿನಿಂದ ವಿಚಲಿತರಾಗಿದ್ದ ಗುರುಪ್ರಸಾದ್ ಸಾಕಷ್ಟು ಸಾಲಗಳಿಗೆ ಸಿಲುಕಿಕೊಂಡಿದ್ದರು. ಕೊನೆಗೆ ಈಗ ನಿಧನ ಹೊಂದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!