HomeUncategorizedಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರಕ್ಕೆ ವ್ಯಾಪಕ ಖಂಡನೆ | ತಲೆ ಮೇಲೆ ಕಲ್ಲು ಹೊತ್ತು...

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರಕ್ಕೆ ವ್ಯಾಪಕ ಖಂಡನೆ | ತಲೆ ಮೇಲೆ ಕಲ್ಲು ಹೊತ್ತು ವಿನೂತನ ಪ್ರತಿಭಟನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ:ಬೆಳಗಾವಿ ಸುವರ್ಣಸೌಧದ ಎದುರು ೨ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಬಾಂಧವರು ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆಸಿದ ಪ್ರತಿಭಟನಾ ಹೋರಾಟ ನಡೆಸುತ್ತಿದ್ದ ವೇಳೆ ಸರಕಾರ ಪೊಲೀಸರ ಮೂಲಕ ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು.

ಪಂಚಮಸಾಲಿ ಸಮಾಜದ ಹೋರಾಟದ ಪಂಜಿಗೆ ಜ್ವಾಲೆ ಅರ್ಪಿಸುವ ಜೊತೆಗೆ ಒಂದು ಗಂಟೆಗೂ ಅಧಿಕ ಕಾಲ ತಲೆಯ ಮೇಲೆ ಕಲ್ಲುಗಳನ್ನು ಹೊತ್ತು ಸರಕಾರದ ದ್ವಿಮುಖ ನೀತಿಯನ್ನು ಖಂಡಿಸಿ, ವಿನೂತನ ಪ್ರತಿಭಟನೆ ಮೂಲಕ ಸರಕಾರಕ್ಕೆ ಪರೋಕ್ಷ ಎಚ್ಚರಿಕೆ ನೀಡಿದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆದ ಪ್ರತಿಭಟನೆ ವೇಳೆ ಸಮಾಜದ ಮುಖಂಡರ ಮೇಲೆ ಸರಕಾರ ಪೊಲೀಸರಿಂದ ಲಾಠಿ ಪ್ರಹಾರ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಯತ್ನ ಮಾಡಿರುವುದು, ಹೋರಾಟದಲ್ಲಿ ಪಾಲ್ಗೊಂಡ ಪಂಚಮಸಾಲಿ ಮುಖಂಡರಿಗೆ ಪೊಲೀಸರು ರಕ್ತ ಬರುವಂತೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಸರಕಾರ ಬೇಷರತ್ತಾಗಿ ಪಂಚಮಸಾಲಿ ಸಮಾಜದ ಕ್ಷಮೆ ಕೇಳಬೇಕು. ಮುಖ್ಯಮಂತ್ರಿಗಳು ಕೂಡಲೇ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿ ಘೋಷಣೆ ಮಾಡಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದರು.

ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿಯ ರಾಜ್ಯಾಧ್ಯಕ್ಷ ಎಸ್.ಎಸ್. ರಡ್ಡೇರ ಮಾತನಾಡಿ, ಶಾಂತಿಯುತ ಹೋರಾಟ ಮಾಡುತ್ತಿದ್ದ ಹೋರಾಟಗಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಗೃಹ ಸಚಿವ ಜಿ. ಪರಮೇಶ್ವರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬಗರ್‌ಹುಕುಂ ಸಾಗುವಳಿದಾರರ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಬಸವಣ್ಣೆಯ್ಯ ಹಿರೇಮಠ ಮಾತನಾಡಿ, ಬ್ರಿಟೀಷರನ್ನು ಎದುರಿಸಿ ಸ್ವಾತಂತ್ರ್ಯಯ ಕಹಳೆ ಮೊಳಗಿಸಿದ ಪಂಚಮಸಾಲಿ ಸಮಾಜದ ವೀರಮಾತೆ ಕಿತ್ತೂರು ಚನ್ನಮ್ಮನವರ ಸಮಾಜ ಬಾಂಧವರು ಮೂಲತಃ ರೈತರು, ದೇಶಕ್ಕೆ ಅನ್ನ ನೀಡುವ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಯುವ ಮುಖಂಡ ಮಹೇಶ ದಾಸರ, ಪ್ರವೀಣ್ ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ ಬೇಲೂರು, ನವಕರ್ನಾಟಕ ಜನಪರ ವೇದಿಕೆ ರಾಜ್ಯ ಪದಾಧಿಕಾರಿಗಳಾದ ಶಿವಾನಂದ ಹಿರೇಮಠ, ಯು.ಆರ್. ಭೂಸನೂರಮಠ ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವ ಸರಕಾರದ ಕ್ರಮವನ್ನು ಖಂಡಿಸಿದರು.

ನವಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆಯ ಎಂ.ಎಸ್. ಪರ್ವತಗೌಡ್ರ, ಪ್ರಭಾಕರ ಹೆಬಸೂರ, ಮಂಜುನಾಥ ಶಾಂತಗೇರಿ, ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿಯ ಪದಾಧಿಕಾರಿಗಳಾದ ಮಹಾದೇವಯ್ಯ ಹಿರೇಮಠ, ಗಣೇಶ ಚಲವಾದಿ, ರತ್ನಾ ಪೂಜಾರ, ರತ್ನಾ ಹಿರೇಮಠ, ಜಿ.ಪಂ ಮಾಜಿ ಸದಸ್ಯರಾದ ಎಸ್.ಬಿ. ಕಲಕೇರಿ, ಹಸಿರು ಸೇನೆ ಮತ್ತು ರೈತ ಸಂಘದ ಅಧ್ಯಕ್ಷರಾದ ಶಂಕರಗೌಡ ಜಾಯನಗೌಡ್ರ ಹಾಗೂ ಬಸಪ್ಪ ವಡ್ಡರ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿವಿಧ ಸಮಾಜದ ಮುಖಂಡರು ಉಪ ತಹಸೀಲ್ದಾರ ಬಸವರಾಜ ಕನ್ನೂರ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು.

ನವಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ ರಾಜ್ಯಾಧ್ಯಕ್ಷ ಪಿ. ಸುಬ್ರಮಣ್ಯ ರೆಡ್ಡಿ ಮಾತನಾಡಿ, ಹೋರಾಟ ನಿರತರನ್ನು ಮುಖ್ಯಮಂತ್ರಿಗಳು ಕರೆದು ಅವರ ಸಮಸ್ಯೆಯ ಕುರಿತು ಚರ್ಚಿಸದೇ ಅವರ ಮೇಲೆ ಲಾಠಿಚಾರ್ಜ್ ಮಾಡಿಸಿರುವುದು ಘೋರ ಅನ್ಯಾಯ. ಇದು ಕೇವಲ ಪಂಚಮಸಾಲಿ ಸಮಾಜದ ಹೋರಾಟಗಾರರಿಗೆ ಕೊಟ್ಟ ಲಾಠಿ ಏಟಲ್ಲ, ಸರ್ವ ಹೋರಾಟಗಾರರಿಗೂ ಸರಕಾರ ಮಾಡಿದ ಅವಮಾನ ಎಂದ ಆಕ್ರೋಶ ವ್ಯಕ್ತಪಡಿಸಿದರು.

ಮುಂಡರಗಿ ತಾಲೂಕು ಸಾರ್ವಜನಿಕ ಹೋರಾಟ ಸಮಿತಿಯ ಸಂಚಾಲಕರಾದ ಬಸವರಾಜ ನವಲಗುಂದ ಮಾತನಾಡಿ, ಶೈಕ್ಷಣಿಕ ಅನುಕೂಲಕ್ಕಾಗಿ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವುದು ಅವಶ್ಯವಿದೆ. ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ 2ಎ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಲಾಠಿಪ್ರಹಾರ ಮಾಡಿದ್ದು ಅಕ್ಷಮ್ಯ ಅಪರಾಧ. ಹೋರಾಟಗಾರರ ಮೇಲೆ ಹಾಕಿದ ಎಲ್ಲ ಪ್ರಕರಣಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!