ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಇಲ್ಲಿನ ತಾ.ಪಂ ರಾಜೀವಗಾಂಧಿ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷರು ಮತ್ತು ಪಿಡಿಒಗಳಿಗೆ ಹಮ್ಮಿಕೊಂಡಿದ್ದ ಭಾರತೀಯ ಮಾನದಂಡಗಳ ಬಳಕೆಯ ಅರಿವು ಮೂಡಿಸುವ ತರಬೇತಿ ಕಾರ್ಯಾಗಾರಕ್ಕೆ ತಾ.ಪಂ ಇಒ ವೈ.ಎಚ್. ಚಂದ್ರಶೇಖರ್ ಚಾಲನೆ ನೀಡಿದರು.
ಭಾರತೀಯ ಮಾನದಂಡಗಳ ಬಳಕೆಯ ಕುರಿತು ಬೆಂಗಳೂರಿನ ಭಾರತೀಯ ಮಾನಕ ಬ್ಯುರೋ ಸಂಪನ್ಮೂಲ ವ್ಯಕ್ತಿ ಮಧುಸೂಧನ್ ತರಬೇತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾದ ಶಿವಕುಮಾರ್, ತಾ.ಪಂ ಸಹಾಯಕ ಲೆಕ್ಕಾಧಿಕಾರಿ ವಿಜಯಕುಮಾರ್, ಗ್ರಾ.ಪಂ ಅಧ್ಯಕ್ಷರು, ಪಿಡಿಒಗಳು ತರಬೇತಿಯಲ್ಲಿ ಭಾಗಿಯಾಗಿದ್ದರು.



