ವಿಜಯಸಾಕ್ಷಿ ಸುದ್ದಿ, ಗದಗ: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ರವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಕೀಳಾಗಿ ಮತ್ತು ಅವಹೇಳನಕರ ಭಾಷೆ ಬಳಕೆ ಮಾಡಿರುವುದನ್ನು ಖಂಡಿಸಿ ಮಂಗಳವಾರ ಗದಗ ಬಂದ್‌ಗೆ ಕರೆ ಕೊಟ್ಟಿರುವ ಪ್ರಗತಿಪರ ಸಂಘಟನೆಗಳ ಒಕ್ಕೂಟಕ್ಕೆ ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾ ಬೆಂಬಲ ಸೂಚಿಸಿದೆ ಎಂದು ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಅಧ್ಯಕ್ಷ ಜುನೇದ ಉಮಚಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌ರವರ ಬಗ್ಗೆ ಕೀಳಾಗಿ ಮತ್ತು ಅವಹೇಳನ ಭಾಷೆ ಬಳಕೆ ಮಾಡಿರುವ ಕೇಂದ್ರ ಗ್ರಹ ಸಚಿವ ಅಮಿತ್ ಶಾ ದೇಶದ ಜನತೆಯ ಕ್ಷಮೆ ಕೇಳಬೇಕು ಮತ್ತು ರಾಷ್ಟçಪತಿಗಳು ಅಮಿತ್ ಶಾ ಅವರ ಸದಸ್ಯತ್ವ ರದ್ದುಗೊಳಿಸಬೇಕೆಂದು ಜುನೇದ ಉಮಚಗಿ ಆಗ್ರಹಿಸಿದ್ದಾರೆ.



