HomeGadag Newsಮಾಸಿಕ ಸಂತೆಯಿಂದ ಸ್ತ್ರೀ ಸಬಲೀಕರಣ: ಶಾಸಕ ಜಿ.ಎಸ್. ಪಾಟೀಲ

ಮಾಸಿಕ ಸಂತೆಯಿಂದ ಸ್ತ್ರೀ ಸಬಲೀಕರಣ: ಶಾಸಕ ಜಿ.ಎಸ್. ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಭಾಗದ ಸ್ವ-ಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಉತ್ತೇಜನ ನೀಡುವುದಕ್ಕಾಗಿ ತಾಲೂಕು ಪಂಚಾಯಿತಿಯು ‘ಮಾಸಿಕ ಸಂತೆ’ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ರೋಣ ಪಟ್ಟಣದಲ್ಲಿ ಅನುಷ್ಠಾನಗೊಳಿಸಿದೆ ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ನುಡಿದರು.

ಪಟ್ಟಣದಲ್ಲಿ ಗುರುವಾರ ಮಾಸಿಕ ಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವ-ಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಈ ಸಂತೆಯನ್ನು ಆಯೋಜಿಸಲಾಗುತ್ತಿದೆ. ಮೊದಲ ಮಾಸಿಕ ಸಂತೆಯನ್ನು ಪಟ್ಟಣದ ಸಂತೆಯಲ್ಲಿ ಗುರುವಾರ ನಡೆಸಲಾಯಿತು. ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ 13 ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.

ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂಚಿಸಿದೆ. ಅದರಂತೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ರೋಣ ಪಟ್ಟಣದಲ್ಲಿ ಈ ಸಂತೆ ಆರಂಭಿಸಲಾಗಿದೆ. ಇತಂಹ ಮಾಸಿಕ ಸಂತೆಯು ಮಹಿಳೆಯರ ಪಾಲಿಗೆ ದಾರಿದೀಪವಾಗುತ್ತವೆ. ಪ್ರತಿ ಗ್ರಾಮದಲ್ಲೂ ಸಹ ಇಂತಹ ಮಾಸಿಕ ಸಂತೆಯನ್ನು ಮಾಡಲು ನಮ್ಮ ಇಓ ಅವರಿಗೆ ಸೂಚನೆ ನೀಡಿದ್ದೇನೆ. ಇದರಿಂದ ಮಹಿಳಾ ಸಂಘಗಳು ಹಾಗೂ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಾರೆ ಎಂದರು.

ತಾ.ಪA ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಮಾತನಾಡಿ, ಸಿಇಓ ಅವರ ಮಾರ್ಗದರ್ಶನದಲ್ಲಿ ಇಂತಹ ಒಂದು ಪರಿಕಲ್ಪನೆ ಮಾಡಲಾಗಿದ್ದು, ಈ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಮಾಡಲಾಗಿದೆ. ಮಾಸಿಕ ಸಂತೆಗಳಲ್ಲಿ ಹೆಚ್ಚಿನ ಸಂಘಗಳು ಪಾಲ್ಗೊಳ್ಳಬೇಕು. ಗುಣಮಟ್ಟದ ಹಾಗೂ ಪರಿಶುದ್ಧವಾದ ಉತ್ಪನ್ನ ತಯಾರಿಸಬೇಕು. ಉತ್ಪನ್ನಗಳ ಬಗ್ಗೆ ಪ್ರಚಾರವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಗೀತಾ ಮಾಡಲಗೇರಿ, ಉಪಾಧ್ಯಕ್ಷರಾದ ದುರಗಪ್ಪ ಹಿರೇಮನಿ, ತಾಲೂಕಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಉಮಾ ಮಂತೂರ, ತಾಲೂಕಿನ ಎಲ್ಲಾ ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಸಂಜೀವಿನಿ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

ಜಿ.ಪಂ ಯೋಜನಾ ನಿರ್ದೇಶಕ ಎಮ್.ವಿ. ಚಳಗೇರಿ ಮಾತನಾಡಿ, ಸಂಜೀವಿನಿ ಸಂಘದ ಉತ್ಪನ್ನವು ಮಾರುಕಟ್ಟೆಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಅದರಲ್ಲಿ ವಿಭಿನ್ನತೆಯಿರಬೇಕು, ಉತ್ಪನ್ನದ ಗುಣಮಟ್ಟ ಮತ್ತು ಅದನ್ನು ಗ್ರಾಹಕರಿಗೆ ನೀಡುವಾಗ ಉತ್ತಮ ಪ್ಯಾಕೇಜಿಂಗ್ ಹೊಂದಿರಬೇಕು. ಆಗ ಮಾತ್ರ ಉತ್ಪನ್ನಗಳು ಜನರನ್ನು ತಲುಪುತ್ತವೆ. ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಯನ್ನು ನಿಗದಿಪಡಿಸಿದಾಗ ಮಾತ್ರ ಹೆಚ್ಚಿನ ವಸ್ತುಗಳು ಮಾರಾಟವಾಗುತ್ತವೆ. ಈ ನಿಟ್ಟಿನಲ್ಲಿ ನೀವು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

 

ಇಂದಿನ ಸಂತೆಯಲ್ಲಿ ಕೆಲವು ಸಂಘಗಳು ಭಾಗವಹಿಸಿವೆ. ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲೂ ಇಂತಹ ಸಂತೆಗಳನ್ನು ಆರಂಭಿಸಲಾಗುವುದು. ಅಲ್ಲಿ ಹೆಚ್ಚಿನ ಸಂಘಗಳಿಗೆ ಅವಕಾಶ ಸಿಗಲಿದೆ. ಮಹಿಳೆಯರು ಆರ್ಥಿಕವಾಗಿ ಮುನ್ನಡೆ ಸಾಧಿಸಲು ಬೇಕಾದ ನೆರವನ್ನೂ ನೀಡಲಾಗುವುದು.

– ಜಿ.ಎಸ್. ಪಾಟೀಲ.

ಶಾಸಕರು, ರೋಣ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!