HomeKarnataka NewsSiddaramaiah: ಹಿಂದೂ‌ಗಳು, ಮುಸ್ಲಿಮರು ಒಟ್ಟಾಗಿ ಹೋಗಬೇಕು: ಸಿಎಂ ಸಿದ್ದರಾಮಯ್ಯ ಕರೆ!

Siddaramaiah: ಹಿಂದೂ‌ಗಳು, ಮುಸ್ಲಿಮರು ಒಟ್ಟಾಗಿ ಹೋಗಬೇಕು: ಸಿಎಂ ಸಿದ್ದರಾಮಯ್ಯ ಕರೆ!

For Dai;y Updates Join Our whatsapp Group

Spread the love

ಬೆಳಗಾವಿ:- ಹಿಂದೂ‌ಗಳು, ಮುಸ್ಲಿಮರು ಒಟ್ಟಾಗಿ ಹೋಗಬೇಕಿದೆ ಎಂದು ಗಾಂಧಿ ಭಾರತ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಗಾಂಧಿ ಭಾರತ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ. ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಪ್ರಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು. ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದರು.

ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ. ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್ ಅವರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ.‌ ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು. ಗಾಂಧಿ-ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್​ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗ್ಯಾರಂಟಿಗಳ ಜೊತೆಗೆ ನಾವು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ಕಾಂಗ್ರೆಸ್​ಗೆ ಮಾತ್ರ ಎಲ್ಲ ಧರ್ಮಗಳನ್ನು ಕೊಂಡೊಯ್ಯುವ ಶಕ್ತಿ ಇದೆ. ನಾವು ದ್ವೇಷಿಸುವ ಕೆಲಸ ಮಾಡಲ್ಲ, ಪರಸ್ಪರ ಪ್ರೀತಿಸುವ ಕೆಲಸ ಮಾಡುತ್ತದೆ. ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ. ನಮ್ಮ ಸಿದ್ಧಾಂತ ಗೆದ್ದರೇ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ. ಹಿಂದೂ‌ಗಳು, ಮುಸ್ಲಿಮರು ಒಟ್ಟಾಗಿ ಹೋಗಬೇಕಿದೆ ಎಂದು ಗಾಂಧಿ ಭಾರತ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!