HomeSports Newsಸ್ಮೃತಿ ಮಂಧಾನಗೆ ಒಲಿದ ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ!

ಸ್ಮೃತಿ ಮಂಧಾನಗೆ ಒಲಿದ ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ!

For Dai;y Updates Join Our whatsapp Group

Spread the love

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಹಾಗೂ ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಗೆ 2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿ ಲಭಿಸಿದೆ.

ಕಳೆದ ವರ್ಷ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಮಹಿಳಾ ಕ್ರಿಕೆಟರ್​ಗಳ ಪಟ್ಟಿಯಲ್ಲಿ ಮಂಧಾನ ಅಗ್ರಸ್ಥಾನವನ್ನು ಪಡೆದುಕೊಂಡಿದ್ದರು. ಮಂಧಾನ ಬಳಿಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡದ ಲಾರಾ ವೋಲ್ವಾರ್ಡ್ಟ್ 697 ರನ್ ಹಾಗೂ ಟ್ಯಾಮಿ ಬ್ಯೂಮಾಂಟ್ 554 ರನ್ ಮತ್ತು ಹೇಲಿ ಮ್ಯಾಥ್ಯೂಸ್ 469 ರನ್ ಕಲೆಹಾಕಿದ್ದಾರೆ.

2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗುವ ಮೂಲಕ ಮಂಧಾನ ತಮ್ಮ ವೃತ್ತಿ ಬದುಕಿನಲ್ಲಿ ನಾಲ್ಕನೇ ಐಸಿಸಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ 2018 ರಲ್ಲಿ ಮೊಟ್ಟ ಮೊದಲ ಬಾರಿಗೆ 2018ರ ಮಹಿಳಾ ಏಕದಿನ ಕ್ರಿಕೆಟರ್​ ಪ್ರಶಸ್ತಿ ಗೆದ್ದಿದ್ದ ಮಂಧಾನ, ಅದೇ ವರ್ಷ 2018 ರ ವರ್ಷದ ಮಹಿಳಾ ಕ್ರಿಕೆಟರ್ ಗೌರವಕ್ಕೂ ಭಾಜನರಾಗಿದ್ದರು.

3 ವರ್ಷದ ಬಳಿಕ ಅಂದರೆ 2021 ರಲ್ಲಿ ಮತ್ತೊಮ್ಮೆ ಐಸಿಸಿ ಗೌರವಕ್ಕೆ ಪಾತ್ರರಾಗಿದ್ದ ಮಂಧಾನ 2021ರ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಯನ್ನು ಎರಡನೇ ಬಾರಿಗೆ ಗೆದ್ದುಕೊಳ್ಳುವಲ್ಲಿ ಸಫಲರಾಗಿದ್ದರು. ಇದೀಗ 2024 ರಲ್ಲಿ ಮಂಧಾನ ಎರಡನೇ ಬಾರಿಗೆ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಈ ಮೂಲಕ ನಾಲ್ಕು ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಕ್ರಿಕೆಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!