ಚಿಕ್ಕಮಗಳೂರು: ಹಿಂದೂ ಮನೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿರುವ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ.
ಮಹೇಶ್ ಎಂಬುವರ ಮನೆ ಮೇಲೆ ತಡರಾತ್ರಿ ಕಲ್ಲು ತೂರಲಾಗಿದೆ. ಕಲ್ಲು ತೂರಾಟ ನಡೆಸಿ, ಘೋಷಣೆ ಕೂಗಿ ಯುವಕರು ಪರಾರಿಯಾಗಿದ್ದಾರೆ. ಕಿಡಿಗೇಡಿಗಳ ಕೃತ್ಯದಿಂದ ಮನೆಯ ಕಿಟಕಿ ಗಾಜು ಪುಡಿಪುಡಿಯಾಗಿದ್ದು,
ಮನೆ ಮಾಲೀಕರು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಸವನಹಳ್ಳಿ ಪೊಲೀಸರು ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.



