ಶಿವಮೊಗ್ಗ:- ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ಜರುಗಿದೆ.
25 ವರ್ಷದ ಮಂಜುಳಾ ಮೃತ ಮಹಿಳೆ. ಫೆ.10 ರಂದು ಅವರಿಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅವರು ಸಾವಿಗೀಡಾಗಿದ್ದಾರೆ.
ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



