HomeGadag Newsಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಸಭೆ

ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಸಭೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ವೆಂಕಟೇಶನ್ ಅವರು ಶುಕ್ರವಾರ ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿಸಿದರು.

ಸಭೆಯಲ್ಲಿ ಪೌರಕಾರ್ಮಿಕರ ನೇಮಕಾತಿ, ಬಡ್ತಿ, ವೇತನ ಪಾವತಿ, ಸಂಕಷ್ಟ ಭತ್ಯೆ ಮತ್ತು ಇಎಸ್‌ಐ, ಪಿಎಪ್ ಜಮೆ ಕುರಿತು ನೇರವಾಗಿ ಪೌರಕಾರ್ಮಿಕರಿಂದ ಹಾಗೂ ಅಧಿಕಾರಿಗಳಿಂದ ಪಡೆದುಕೊಂಡರು. ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ ಪತ್ರಗಳನ್ನು ಆದಷ್ಟು ಬೇಗ ನೀಡುವಂತೆ ಸೂಚಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಅಳ್ನಾವರ ಮತ್ತು ಕಲಘಟಗಿ ಪಟ್ಟಣ ಪಂಚಾಯತಿಗಳಲ್ಲಿ ಹಾಗೂ ಕುಂದಗೋಳ, ಅಣ್ಣಿಗೇರಿ ಮತ್ತು ನವಲಗುಂದ ಪುರಸಭೆಗಳಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ಪ್ರತ್ಯೇಕವಾಗಿ ಮಾತನಾಡಿಸಿ, ಕುಂದುಕೊರತೆಗಳನ್ನು ವಿಚಾರಿಸಿದರು.

ನಗರ ಸ್ಥಳೀಯ ಸಂಸ್ಥೆಗಳು ಪೌರಕಾರ್ಮಿಕರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ಪೂರೈಸಬೇಕು. ಕೆಲಸದಲ್ಲಿ ಉತ್ತಮ ಉಪಹಾರ, ಸುರಕ್ಷಾ ಸಾಧನಗಳನ್ನು ನೀಡಬೇಕು ಮತ್ತು ಕಾಲಕಾಲ ಆರೋಗ್ಯ ತಪಾಸಣೆ ಮಾಡಬೇಕೆಂದು ಸೂಚಿಸಿದರು.

ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಗಾಳಿ ಸಭೆ ನಿರ್ವಹಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ರಾಮಪ್ಪ ಕೃಷ್ಣಪ್ಪ ಬಡಿಗೇರ, ಉಪ ಮಹಾಪೌರ ಬಿಜವಾಡ ದುರ್ಗಮ್ಮಾ ಶಶಿಕಾಂತ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ಅಧೀಕ್ಷಕ ಗೋಪಾಲ ಬ್ಯಾಕೋಡ್, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಪಾಲಿಕೆ ವಿರೋಧ ಪಕ್ಷದ ನಾಯಕ ರಾಜು ಕಮತಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ ಅವರು ವೇದಿಕೆಯಲ್ಲಿದ್ದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಪೌರಕಾರ್ಮಿಕರು, ಜಿಲ್ಲಾ ಸಫಾಯಿ ಕರ್ಮಚಾರಿಗಳ ಸಮಿತಿ ಸದಸ್ಯರು, ಪೌರಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img