ವಿಜಯಸಾಕ್ಷಿ ಸುದ್ದಿ, ಗದಗ: ದಿ. ಕೆ.ಎಚ್. ಪಾಟೀಲರ ಶತಮಾನೋತ್ಸವ ಆಚರಣೆ ನಿಮಿತ್ತ ಮಾರ್ಚ್ 16ರಂದು ಮುಂಜಾನೆ 11 ಗಂಟೆಗೆ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ದಿ. ಕೆ.ಹೆಚ್. ಪಾಟೀಲರ ಜಯಂತಿ ವಿಜೃಂಭಣೆಯಿಂದ ಜರುಗುವುದು. ಇದರಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ, ರೋಣ ಶಾಸಕರಾದ ಜಿ.ಎಸ್. ಪಾಟೀಲ ಹಾಗೂ ಮಾಜಿ ಶಾಸಕರಾದ ಡಿ.ಆರ್. ಪಾಟೀಲ ಸೇರಿದಂತೆ ಅನೇಕ ಧುರೀಣರು ಭಾಗವಹಿಸುವರು.
ಗದಗ ಜಿಲ್ಲಾ ಮುಸ್ಲಿಂ ಸಮಾಜ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶತಮಾನೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಜಿ.ಎಮ್. ದಂಡಿನ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



