ಬೆಂಗಳೂರು: ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮೊದಲು ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು, ಆದರೆ ಈಗ ಕೋರ್ಟ್ಗೆ ಹಾಜರಾಗದ ಕಾರಣ ಅವರ ಬಂಧನವಾಗಿದ್ದು, ಇದೀಗ ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ರೀಲ್ಸ್ ಕೇಸ್‌ಗೆ ಸಂಬಂಧ ವಿಚಾರಣೆಗೆ ರಜತ್‌ಗೆ 2 ಬಾರಿ ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಾಗುತ್ತದೆ. ರೀಲ್ಸ್ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು.



