HomePolitics Newsಸರ್ಕಾರದ ಕಾನೂನು ಬಳಸಿಕೊಳ್ಳಿ: ಮತಾಂತರಕ್ಕೆ ಹಿಂದೂಗಳಿಗೆ ಬಹಿರಂಗ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ!

ಸರ್ಕಾರದ ಕಾನೂನು ಬಳಸಿಕೊಳ್ಳಿ: ಮತಾಂತರಕ್ಕೆ ಹಿಂದೂಗಳಿಗೆ ಬಹಿರಂಗ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ!

For Dai;y Updates Join Our whatsapp Group

Spread the love

ಮಂಗಳೂರು:- ಹಿಂದೂಗಳು ಮತಾಂತರ ಮಾಡುವಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು, ಬಹಿರಂಗವಾಗಿ ಕರೆ ಕೊಟ್ಟಿದ್ದಾರೆ.

ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುತ್ತಾ ಮಾತನಾಡಿದ ಅವರು, ಇತ್ತೀಚೆಗೆ ಬಜರಂಗದಳದವರು ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಜಾಸ್ತಿ ಮಾಡಲು ಏನು ಐಡಿಯಾ ಇದೆ ಅಂತ ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡಿಕೊಳ್ತೇವೆ ಅಂತ ಹೇಳಿದ್ರು. ಆದ್ರೆ ನಮ್ಮ ಜನ 2-3 ಮಕ್ಕಳನ್ನ ಮಾಡ್ತಾರೇನ್ರೀ? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಚರ್ ಹಾಕಲು ಕಳುಹಿಸಲು ಇಷ್ಟ ಇಲ್ಲ. ಅವರಿಗೆ ನಮ್ಮ ಮಕ್ಕಳು ಚೆನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಿ ಮಾಡಬೇಕು ಅನ್ನೋದಷ್ಟೇ ಇದೆ. ಹಾಗಾಗಿ ಓದಿಸೋ ಕೆಪಾಸಿಟಿ ಇಲ್ಲದ ಕಾರಣ ಒಂದು ಸಾಕು, ಎರಡು ಸಾಕು ಅಂತಾರೆ. ಹಾಗಾಗಿ ಸರ್ಕಾರ ನಮಗಾಗಿ ಮಾಡಿರೋ ಕಾನೂನುಗಳನ್ನು ಬಳಸಿಕೊಳ್ಳಿ ಅಂತ ಕರೆ ಕೊಟ್ಟಿದ್ದಾರೆ.

ಪೊಲೀಸರಿಗೂ ಹೇಳ್ತಾ ಇದೀನಿ, ಇದು ಸರ್ಕಾರ ಕೊಟ್ಟಿರೋ ಕಾನೂನು, ನಮ್ಮದಲ್ಲ. ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು, ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದು ಅಂತ. ಸರ್ಕಾರವೇ ಧೈರ್ಯವಾಗಿ ಹೇಳಿದೆ, ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ? ಜಗತ್ತಿನ ಯಾವ ರಾಷ್ಟ್ರದಲ್ಲೂ ಈ ರೀತಿಯ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ, ಸರ್ಕಾರವೇ ಅಧಿಕೃತವಾಗಿ ಹೇಳಿದೆ, ಮಾಡಲು ನಿಮಗೆ ಕಷ್ಟ ಏನು? ಅಂತ ಪ್ರಶ್ನೆ ಮಾಡಿದ್ದಾರೆ.

ಮತಾಂತರ ಮಾಡೋದು ಕಷ್ಟ ಏನಿಲ್ಲ, ನಾನು ಜಗತ್ತಿನ ಅತ್ಯಂತ ಶ್ರೇಷ್ಠ ಹಿಂದೂ ಧರ್ಮಕ್ಕೆ ಸೇರಿದವನು. ಜಗತ್ತಿನಲ್ಲಿ ಅನೇಕ ಮತ ಪಂಥಗಳಿವೆ, ಆದರೆ ಅವರಿಗೆಲ್ಲಾ ಒಬ್ಬನೇ ದೇವರು. ಒಬ್ಬ ದೇವರಿಗೆ ಸಮಸ್ಯೆಯಾದ್ರೆ ಆ ಧರ್ಮವೇ ಹೋಯಿತು, ಆದರೆ ನಮಗೆ 33 ಕೋಟಿ ದೇವತೆಗಳು. ನೀವು ರಾಮನನ್ನ ಬೈದರೆ ನಾನು ಸೀತೆಯನ್ನ ಹಿಡಿದುಕೊಳ್ತೀನಿ. ನೀವು ಸೀತೆಗೆ ಕಳಂಕ ತರೋ ಪ್ರಯತ್ನ ಪಟ್ಟರೆ ಶ್ರೀಕೃಷ್ಣ ಇದ್ದಾನೆ. ಕೃಷ್ಣನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನಮಗೆ ಮಂಜುನಾಥಸ್ವಾಮಿ ಇದ್ದಾನೆ. ನೀವು ಮಂಜುನಾಥನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನನಗೆ ಊರಲ್ಲೊಂದು ದೇವಸ್ಥಾನ ಇದೆ, ಎಲ್ಲಿ ಬೇಕಾದರೂ ಹೋಗ್ತೀನಿ ಅಂತ ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!