ಹಾಸನ: ಇತ್ತೀಚಿನ ವರ್ಷಗಳಲ್ಲಿ ಯುವಜನತೆ ಮತ್ತು ಮಧ್ಯವಯಸ್ಸಿನವರು ಹೆಚ್ಚಾಗಿ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಅದರಂತೆ ಇದೀಗ ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.
ಸಂಧ್ಯಾ (19) ಮೃತ ದುರ್ಧೈವಿಯಾಗಿದ್ದು, ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.
ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟು ಹೊತ್ತಿಗೆ ಸಂಧ್ಯಾಳ ಪ್ರಾಣ ಹೋಗಿತ್ತು.



