HomeBengaluru Newsಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಹಂಸಲೇಖ, ಶ್ರೀ ಸಾಧು ಕೋಕಿಲ ಹಾಗೂ ಶ್ರೀ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವ ಹಾಗೂ ಆರತಿಯ ಮಹಿಮೆಯನ್ನು ಮೇಳೈಸುವ ಅದ್ಭುತವಾದ ಸಾಹಿತ್ಯ ಮತ್ತು ಗೀತ ಸಂಯೋಜನೆ ಆಗಬೇಕಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.

ರಚನೆಯಾದ ಈ ಗೀತೆಯನ್ನು ಧ್ವನಿ ಸುರಳಿ ರೂಪದಲ್ಲಿ ತಂದು, ಕಾವೇರಿ ಆರತಿ ಸಂದರ್ಭದಲ್ಲಿ ಬರುವ ಭಕ್ತಾದಿಗಳಿಗೆ ಕಣ್ಣು ತುಂಬಿಕೊಳ್ಳುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ, ಕಾವೇರಿಯ ಮೆರುಗನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ ಮಾಡುವಂತೆಯೂ, ಆಯ್ಕೆಯಾದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಮೂಲಕ ಕಾವೇರಿ ನದಿಯ ಮಹತ್ವವನ್ನು ಸಾಂಸ್ಕೃತಿಕವಾಗಿ ಎತ್ತಿ ಹಿಡಿಯುವ ಮತ್ತು ಭಕ್ತಾದಿಗಳಲ್ಲಿ ಭಕ್ತಿ ಭಾವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಡಿ.ಕೆ. ಶಿವಕುಮಾರ್  ಹೇಳಿದ್ದಾರೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!