HomeGadag Newsಜೂ.3ರಂದು ಸಿ.ಎಂ ಸಿದ್ದರಾಮಯ್ಯ ಲಕ್ಕುಂಡಿಗೆ

ಜೂ.3ರಂದು ಸಿ.ಎಂ ಸಿದ್ದರಾಮಯ್ಯ ಲಕ್ಕುಂಡಿಗೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: 101 ಗುಡಿ, 101 ಬಾವಿಗಳನ್ನು ಪತ್ತೆ ಹಚ್ಚುವ ಉತ್ಖನನ ಕಾಮಗಾರಿಗೆ ಚಾಲನೆ ನೀಡಲು ಐತಿಹಾಸಿಕ ಲಕ್ಕುಂಡಿ ಗ್ರಾಮಕ್ಕೆ ಜೂನ್ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಈ ಕುರಿತು ಇಲ್ಲಿಯ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

ಇಲ್ಲಿಯ ಕೋಟೆ ವೀರಭದ್ರೆಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನ ಕಾಮಗಾರಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿರುವಂತೆ ಬಯಲು ವಸ್ತು ಸಂಗ್ರಾಲಯದ ಭೂಮಿ ಪೂಜೆ, ಕಾಶಿ ವಿಶ್ವನಾಥ, ನನ್ನೇಶ್ವರ ದೇಗುಲ ಹಾಗೂ ಜಂತ್ಲಿ ಶಿರೂರ ರಸ್ತೆಯಲ್ಲಿಯ ಐತಿಹಾಸಿಕ ಕಲ್ಮಠದ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಲಿದ್ದಾರೆ ಎಂದು ಲಕ್ಕುಂಡಿ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಸಭೆಗೆ ತಿಳಿಸಿ ಗ್ರಾಮದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಲು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಕೆ.ಎಸ್. ಪೂಜಾರ ಮಾತನಾಡಿ, ಗ್ರಾಮದ ನೈರ್ಮಲ್ಯ ಕಾಪಾಡಿಕೊಂಡು ಗ್ರಾಮಸ್ಥರ ಸಹಾಯ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗವುದು ಎಂದು ಭರವಸೆ ನೀಡಿದರು.

ಕಳೆದ ಮೂರು ವರ್ಷಗಳಿಂದ ಗ್ರಾಮದಲ್ಲಿ ಜೆ.ಜೆ.ಎಂ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳು ಅಪೂರ್ಣಗೊಂಡು ಗ್ರಾಮಸ್ಥರಿಗೆ ಕುಡಿಯುವ ನೀರಿನ ತೊಂದರೆಯಾಗಿದೆ. ಆದ್ದರಿಂದ ಮುಂದಿನ 15 ದಿನಗಳ ಒಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ ಎಂದು ಪಿ.ಡಿ.ಒ ಅಮೀರನಾಯಕ ತಿಳಿಸಿದರು.

ಮನೇರೆಗಾ ಕಾಮಗಾರಿಯಲ್ಲಿ ಕ್ರಿಯಾ ಯೋಜನೆಯಂತೆ 27400 ಮಾನವ ದಿನಗಳ ಗುರಿಯನ್ನು ತಲುಪಲಾಗಿದ್ದು, ಸಹಕಾರ ನೀಡಿದ ಕೂಲಿ ಕಾರ್ಮಿಕರಿಗೆ, ಸಿಬ್ಬಂದಿ ವರ್ಗವನ್ನು ಅಭಿನಂದಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಕೆ.ಎಸ್. ಪೂಜಾರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ಕಾರ್ಯದರ್ಶಿ ಪ್ರದೀಪ ಆಲೂರ, ಎಸ್.ಡಿ.ಎ ಎಂ.ಎ. ಗಾಜಿ, ಗ್ರಾ.ಪಂ. ಸದಸ್ಯರು ಹಾಜರಿದ್ದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಲಕ್ಕುಂಡಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡಲು ಮನೆ ಮನೆಗೆ ತೆರಳಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ವಿನಂತಿಸಿ, 1 ಕೆ.ಜಿ ಪ್ಲಾಸ್ಟಿಕ್ ತಂದುಕೊಟ್ಟವರಿಗೆ 2 ಕೆ.ಜಿ ಸಕ್ಕರೆಯನ್ನು ಕೊಡಲಾಗುವುದು. ಸ್ವಚ್ಛ ಭಾರತ ಯೋಜನೆಯಡಿ ಬಾಕಿ ಇರುವ 350 ಮನೆಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಲು ಜಾಗೃತಿ ಮೂಡಿಸುವುದು, ತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕವನ್ನು ಆರಂಭಿಸುವುದು, ಒಣ ಕಸವನ್ನು ಸಂಗ್ರಹಿಸಿ ವಿಲೇವಾರಿ ವಾಹನದಲ್ಲಿ ಹಾಕಲು ಜಾಗೃತಿ ಮೂಡಿಸುವ ಕುರಿತು ಚರ್ಚೆ ನಡೆಯಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!