HomeKarnataka Newsಹಟ್ಟಿ ಚಿನ್ನದಗಣಿಯಲ್ಲಿ ಏರ್ ಬ್ಲಾಸ್ಟ್: ಓರ್ವ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ!

ಹಟ್ಟಿ ಚಿನ್ನದಗಣಿಯಲ್ಲಿ ಏರ್ ಬ್ಲಾಸ್ಟ್: ಓರ್ವ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ!

For Dai;y Updates Join Our whatsapp Group

ರಾಯಚೂರು:- 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ ಆಗಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಲಿಂಗಸುಗೂರಿನ ಹಟ್ಟಿ ಚಿನ್ನದಗಣಿಯಲ್ಲಿ ಜರುಗಿದೆ. 40 ವರ್ಷದ ಶರಣಬಸವ ಮೃತ ಕಾರ್ಮಿಕ.

ಗಂಭೀರ ಗಾಯಗೊಂಡ ಕಾರ್ಮಿಕನನ್ನು ನಿರುಪಾದಿ ಎಂದು ಗುರುತಿಸಲಾಗಿದೆ. ಚಿನ್ನದ ಗಣಿಯ ಮಲ್ಲಪ್ಪ ಶಾಫ್ಟ್‍ನಲ್ಲಿ ಈ ಅವಘಡ ಸಂಭವಿಸಿದೆ. ಸುಮಾರು 2,800 ಅಡಿ ಆಳದಲ್ಲಿ ಗಣಿಗಾರಿಕೆ ಮಾಡುತ್ತಿದ್ದಾಗ ಏರ್ ಬ್ಲಾಸ್ಟ್ ಆಗಿದೆ ಎಂದು ತಿಳಿದು ಬಂದಿದೆ. ಕೆಳಗೆ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಚಿನ್ನದ ಗಣಿ ರೆಸ್ಕ್ಯೂ ಟೀಂನಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಚಿನ್ನದ ಗಣಿ ಅಧಿಕಾರಿಗಳು ಬೇಟಿ ನೀಡಿದ್ದ ವೇಳೆ ಕಾರ್ಮಿಕರು ಆಕ್ರೋಶ ಹೊರ ಹಾಕಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img