ವಿಜಯಸಾಕ್ಷಿ ಸುದ್ದಿ, ಗದಗ: ಎನ್.ಎಸ್.ಯು.ಆಯ್ ಗದಗ ಜಿಲ್ಲಾ ಘಟಕದ ಅಧ್ಯಕ್ಷನಾಗಿ 2 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿರುವ ಈಗಿನ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಹಾಗೂ ಎಸ್.ಎಮ್.ಇ ಸಂಸ್ಥೆಯ ಅಬ್ದುಲ್ ಕಲಾಂ ಬಿಸಿಎ ಮಹಾವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ, ಶಿಕ್ಷಣ ಪ್ರೇಮಿ, ಯುವ ನಾಯಕ ಅಹಮ್ಮದ ಹುಸೇನ ಖಾಜಿ ಅವರ ಜನ್ಮದಿನದ ನಿಮಿತ್ತ ಜೂನ್ 20ರಂದು ಅವರ ಅಭಿಮಾನಿ ಬಳಗದವರು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಅಬ್ದುಲ್ ಕಲಾಂ ಮಹಾವಿದ್ಯಾಲಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ.
ಇದರೊಂದಿಗೆ ಹಲವಾರು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಸಮಾಜಮುಖಿಯಾಗಿ ಜನ್ಮ ದಿನಾಚರಣೆ ಆಚರಿಸಿ ಸಂಭ್ರಮಿಸಲಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ರಾಜು ಪೆಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



