ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಹುಲಿಗಳ ಮೃತದೇಹಗಳ ಬಳಿ ವಿಷಪ್ರಾಶನಗೊಂಡ ಹಸುವಿನ ಶವ ಕಂಡುಬಂದಿದೆ. ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ ನಾಲ್ಕು ಹುಲಿಗಳ ಸಾವಿಗೆ ಸಂಬಂಧಪಟ್ಟಂತೆ ತನಿಖೆಗೆ ಸೂಚಿಸಲಾಗಿದೆ. ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಹಾಗೂ ಮೂರು ಮರಿಗಳು ಸಾವನ್ನಪ್ಪಿರುವುದು ಬೆಳಕಿಗೆ. ನಂದಿದೆ. ಮೇಲ್ನೋಟಕ್ಕೆ ಹುಲಿಗಳಿಗೆ ವಿಷ ನೀಡಿರುವುದಾಗಿ ವರದಿಗಳು ತಿಳಿಸಿವೆ. ತನಖೆ ಬಳಿಕ ಸಂಪೂರ್ಣ ಮಾಹಿತಿ ಸಿಗಲಿದೆ.



