ಮಂಗಳೂರು: ಧರ್ಮಸ್ಥಳ ವಿರುದ್ದ ಅಪಪ್ರಚಾರ ಮಾಡಿದ ಆರೋಪಡಿ ಯೂಟ್ಯೂಬರ್ ಸಮೀರ್ ಎಂಡಿ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಹೌದು ಬಂಧನ ಭೀತಿ ಎದುರಾಗುತ್ತಲೇ ಸಮೀರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಯೂಟ್ಯೂಬರ್ ಸಮೀರ್‌ಗೆ ಮಂಗಳೂರು ಮಂಗಳೂರು ಜಿಲ್ಲಾ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಜೊತೆಗೆ ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್ ಸೂಚನೆ ನೀಡಿದೆ. ಬೆಳ್ತಂಗಡಿ ಪೊಲೀಸರಿಂದ ಯೂಟ್ಯೂಬರ್ ಸಮೀರ್ ಎಮ್‌ಡಿ ಅರೆಸ್ಟ್ ಮಾಡಲು ಸಿದ್ಧತೆ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಕೇಸ್ ನಲ್ಲಿ ಸಮೀರ್‌ನನ್ನು ಬಂಧನ ಮಾಡಲು ಪೊಲೀಸರು ಮುಂದಾಗಿದ್ದರು. ಈ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದಲೇ ಬನ್ನೇರುಘಟ್ಟದ ಸಮೀರ್ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು,
ಕೋರ್ಟ್‌ನಿಂದ ಆದೇಶ ಪ್ರತಿ ಬರುತ್ತಿದ್ದಂತೆಯೇ ಸಮೀರ್ ಮನೆಗೆ ಭೇಟಿ ನೀಡಿ ವಶಕ್ಕೆ ಪಡೆಯಲು ಮುಂದಾಗಿದ್ದರು. ಆದರೆ ಪೊಲೀಸರು ಮನೆಗೆ ಬರುವ ಮುನ್ನವೇ ಮನೆಯಿಂದ ಎಸ್ಕೇಪ್ ಆಗಿದ್ದರು. ಅಲ್ಲದೇ ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನೂ ಸಲ್ಲಿಸಿದ್ದರು. ಇದೀಗ ಮಂಗಳೂರು ಜಿಲ್ಲಾ ನ್ಯಾಯಾಲಯ ಯೂಟ್ಯೂಬರ್ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.



