ಮಂಡ್ಯ:- ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ವಳಗೆರೆ ಮೆಣಸ ಗ್ರಾಮದ ಕಾವ್ಯ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ ಕಚೇರಿಯಲ್ಲಿ ಶುಕ್ರವಾರ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ.
ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



