ಕೋಲಾರ:ರಜೆಯಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ನಡೆದಿದೆ.
ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಮುನಿ ನಾರಾಯಣ ಅವರು, ಕಳೆದ ಎರಡು ತಿಂಗಳ ಹಿಂದೆ ರಜೆ ಪಡೆದು ಊರಿಗೆ ಬಂದಿದ್ದರು. ಕಳೆದ ರಾತ್ರಿ ಮಲಗಿದ್ದಾಗ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇಂದು ಸ್ವಗ್ರಾಮ ಆಚಂಪಲ್ಲಿ ಗ್ರಾಮದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಘಟನೆಯ ಬಗ್ಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



