ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಶವ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಸರಣಿ ವೀಡಿಯೋಗಳು ಹೊರಬರುತ್ತಿರುವ ನಡುವೆ, ಬುರುಡೆ ಚಿನ್ನಯ್ಯ ನನ್ನು ಇಂದು ಎಸ್‌ಐಟಿ ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿಗೆ ಪೊಲೀಸರು ಮೂರನೇ ನೋಟಿಸ್ ಸರ್ವ್ ಮಾಡಲು ಸಿದ್ಧತೆ ನಡೆಸಿದ್ದಾರೆ.
ನಿರೀಕ್ಷಣಾ ಜಾಮೀನಿಗಾಗಿ ತಿಮರೋಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಧರ್ಮಸ್ಥಳದ ಬುರುಡೆ ಗ್ಯಾಂಗ್‌ನ ಎಸ್‌ಐಟಿ ತನಿಖೆ ಸಾವಧಾನವಾಗಿ ಸಾಗಿದೆ. ಪಿನ್ ಟು ಪಿನ್ ಮಾಹಿತಿಗಳನ್ನು ಕಲೆ ಹಾಕುತ್ತಿರುವ ಪೊಲೀಸರು, ಬುರುಡೆ ಚಿನ್ನಯ್ಯನನ್ನು ಮತ್ತೆ ಕೋರ್ಟ್‌ಗೆ ಇಂದು ಹಾಜರುಪಡಿಸಲಿದ್ದಾರೆ. ಹೆಚ್ಚುವರಿ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸುವ ಕಾರ್ಯ ನಡೆಯಲಿದೆ.
ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಈಗಾಗಲೇ ಒಂದು ಬಾರಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಕರೆ ತಂದಿದ್ದು, ಇಂದು ಹೇಳಿಕೆ ದಾಖಲಿಸಲು ನ್ಯಾಯಾಧೀಶರು ಅನುಮತಿ ನೀಡಿದ್ದರು. ಹೀಗಾಗಿ ಮತ್ತೆ ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ನನ್ನು ಕರೆ ತಂದು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.



