ಬೆಂಗಳೂರು: ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಹಾಲಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿದೆ. ಸಿಐಡಿ ಪೊಲೀಸರು ಕರ್ನಾಟಕ ಹೈಕೋರ್ಟ್‌ನಲ್ಲಿ ಬೈರತಿ ಬಸವರಾಜ್ ಬಂಧನ ಅಗತ್ಯವಿದೆ ಎಂದು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೈಕೋರ್ಟ್ನ ಲ್ಲಿ ವಾದ ಪ್ರತಿವಾದಗಳು ನಡೆದಿದ್ದು, ಪ್ರಾಸಿಕ್ಯೂಷನ್ ಪರ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಬಿ.ಎನ್. ಜಗದೀಶ್ ಅವರು ವಾದಮಾಡಿದ್ದಾರೆ.
ಬೈರತಿ ಬಸವರಾಜ್ ವಿಚಾರಣೆಯ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಿಐಡಿ ಪೊಲೀಸರ ಅರ್ಜಿಗೆ ಬೈರತಿ ಬಸವರಾಜ್ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಳೆದ ಒಂದು ತಿಂಗಳಿನಿAದ ವಿಚಾರಣೆಗೇ ಕರೆದಿಲ್ಲ. ಈ ಹಿಂದೆ ಪೊಲೀಸರು ಕರೆದಾಗಲೆಲ್ಲಾ ವಿಚಾರಣೆಗೆ ಸಹಕರಿಸಿದ್ದಾರೆ.
ಈಗ ಬಂಧನದ ಅಗತ್ಯವಿದೆ ಎಂದು ಹೇಳುತ್ತಿದ್ದಾರೆ ಎಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದ್ದಾರೆ. ರಾಜಕೀಯ ದೃಷ್ಟಿಯಿಂದ ಕಿರುಕುಳ ನೀಡಬಾರದು. ಎಷ್ಟು ದಿನಗಳ ಕಸ್ಟಡಿ ಬೇಕೆಂದು ಕೋರ್ಟ್ಗೆ ತಿಳಿಸಿ ಎಸ್‌ಪಿಪಿಗೆ ನ್ಯಾ. ಎಂ.ಐ.ಅರುಣ್ ಅವರಿದ್ದ ಪೀಠ ಕೇಳಿದೆ. ಅ.8 ರೊಳಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ.



