HomeGadag Newsಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಿ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಿ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸತ್ಯ ಮತ್ತು ಅಹಿಂಸೆ ದುರ್ಗುಣಗಳನ್ನು ದೂರ ಮಾಡಿ ಸದ್ಗುಣಗಳು ಹೊರಹೊಮ್ಮುವಂತೆ ಮಾಡುತ್ತವೆ. ಸತ್ಯ ಮತ್ತು ಅಹಿಂಸೆ ವಿಶಿಷ್ಟ ಮೌಲ್ಯಗಳಾಗಿವೆ ಎಂದು ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ನಡೆದ 2766ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಬಸವಣ್ಣ ಬ್ರಹ್ಮ ಪದವಿಯನೊಲ್ಲೆ, ವಿಷ್ಣುಪದವಿಯನೊಲ್ಲೆ ಎಂದರು. ಮಹಾತ್ಮ ಗಾಂಧೀಜಿ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರೂ ಯಾವ ಅಧಿಕಾರ ಬಯಸಲಿಲ್ಲ. ಸತ್ಯ, ಅಹಿಂಸೆ ಮತ್ತು ಸಮಾನತೆಯ ಹಾದಿಯಲ್ಲಿ ಬಸವಣ್ಣ ಮತ್ತು ಗಾಂಧೀಜಿ ಸಾಗಿದರು.

ಅಹಿಂಸೆಗೆ ತಲೆಬಾಗದ ವ್ಯಕ್ತಿಗಳೇ ಇಲ್ಲ. ಸಾಮಾಜಿಕವಾಗಿ, ಧಾರ್ಮಿಕವಾಗಿ, ಸತ್ಯ ಅಹಿಂಸೆಯಂತೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಇಷ್ಟಲಿಂಗ ಧರಿಸಬೇಕು, ಜಂಗಮಸೇವೆ ಮಾಡಬೇಕು. ಇಷ್ಟಲಿಂಗ ಸಮಾನತೆಯ ಸಂಕೇತ ಎಂದು ಆಶೀರ್ವಚನ ನೀಡಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಶೇಕಣ್ಣ ಕವಳಿಕಾಯಿ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದ ವ್ಯವಸ್ಥೆ ಮಾಡಿದ ಬಗ್ಗೆ ಅಭಿಮಾನದಿಂದ ಮಾತನಾಡಿದರು. ಲಿಂಗಾಯತ ಮಹಾಸಭಾದ ಅಧ್ಯಕ್ಷ ಕೆ.ಎಸ್. ಚಟ್ಟಿ ಉಪಸ್ಥಿತರಿದ್ದರು. ಬಸವ ಸಂಸ್ಕೃತಿ ಅಭಿಯಾನದ ಯಶಸ್ಸಿಗೆ ತಿಂಗಳ ಪರ್ಯಂತ ಮಹಾದಂಡನಾಯಕರಂತೆ ಮುಂಚೂಣಿಯಲ್ಲಿ ಇದ್ದು ಯಶಸ್ಸಿಗೆ ಕಾರಣರಾದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳನ್ನು ಗದಗ ಜಿಲ್ಲೆಯ ಲಿಂಗಾಯತ ಮಹಾಸಭಾದ ಎಲ್ಲಾ ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಗೌರವಪೂರ್ವಕವಾಗಿ ಸನ್ಮಾನಿಸಿದರು.

ವಚನಸಂಗೀತವನ್ನು ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ನಡೆಸಿಕೊಟ್ಟರು. ಧರ್ಮಗ್ರಂಥ ಪಠಣವನ್ನು ಮಹೇಶ್ ರವಿಕುಮಾರ್ ಪುರಾಣಿಕಮಠ ಹಾಗೂ ವಚನ ಚಿಂತನವನ್ನು ಮಹಾಂತೇಶ ರವಿಕುಮಾರ್ ಪುರಾಣಿಕಮಠ ನಡೆಸಿದರು. ದಾಸೋಹ ಸೇವೆಯನ್ನು ಸಿದ್ದಲಿಂಗಪ್ಪ ಕಾತರಕಿ, ಉಮಾದೇವಿ ಕಾತರಕಿ ಹಾಗೂ ಶೋಭಾ ಕಾತರಕಿ ವಹಿಸಿದ್ದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಉಪಾಧ್ಯಕ್ಷ ಡಾ. ಉಮೇಶ್ ಪುರದ, ವಿದ್ಯಾ ಪ್ರಭಾ ಗಂಜಿಹಾಳ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹಕಾರ್ಯದರ್ಶಿ ಸೋಮನಾಥ ಪುರಾಣಿಕ, ನಾಗರಾಜ್ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ, ಶಿವಾನುಭವ ಸಮಿತಿಯ ಸಹ ಚೇರಮನ್ ಶಿವಾನಂದ ಹೊಂಬಳ ಸೇರಿದಂತೆ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು. ಶಿವಾನುಭವ ಸಮಿತಿಯ ಚೇರಮನ್ ಐ.ಬಿ. ಬೆನಕೊಪ್ಪ ಸ್ವಾಗತಿಸಿದರು. ವಿದ್ಯಾ ಪ್ರಭಾ ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು.

ಉಪನ್ಯಾಸಕರಾಗಿ ಆಗಮಿಸಿದ ಮುಳಗುಂದ ಎಸ್‌ಜೆಜೆಎಂ ಪದವಿಪೂರ್ವ ಕಾಲೇಜಿನ ಶರಣ ರವೀಂದ್ರ ಆರ್. ಪಟ್ಟಣ ಮಾತನಾಡಿ, ಸತ್ಯ ಮತ್ತು ಅಹಿಂಸೆ ಎಲ್ಲಾ ಧರ್ಮಗಳ ಸಾರ. ಗಾಂಧೀಜಿಯವರ ದಿವ್ಯ ವ್ಯಕ್ತಿತ್ವವನ್ನು ಲಾರ್ಡ್ ಮೌಂಟ್ ಬ್ಯಾಟನ್, ಮಾರ್ಟಿನ್ ಲೂಥರ್ ಕಿಂಗ್ ಸೇರಿದಂತೆ ಅನೇಕ ಬ್ರಿಟಿಷ್ ಅಧಿಕಾರಿಗಳು ಪ್ರಶಂಸಿಸಿದ್ದಾರೆ. ಬಸವಣ್ಣನವರು ಸತ್ಯ ಮತ್ತು ಅಹಿಂಸೆ ಮಾನವನ ಬದುಕಿನಲ್ಲಿ ವಿಶಿಷ್ಟ ಗುಣಗಳು ಎಂದರು. ಸತ್ಯ ಮತ್ತು ಅಹಿಂಸೆಯನ್ನು ಮಾನವನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!