ಬೆಂಗಳೂರು: ನವೆಂಬರ್ನಲ್ಲಿ ಕ್ರಾಂತಿ ಚರ್ಚೆ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್ಸಿ ಯತೀಂದ್ರ ಮಾತು ಕಾಂಗ್ರೆಸ್ನಲ್ಲಿ ಕಿಚ್ಚು ಹಚ್ಚಿಸಿದೆ. ಸದ್ಯ ಈ ಕುರಿತಾಗಿ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಯತೀಂದ್ರ ಅವರು ಸೈದ್ಧಾಂತಿಕವಾಗಿ ಸತೀಶ್ ಜಾರಕಿಹೊಳಿ ಹೆಸರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? . ಹಿಂದೆ ಅವರು ಅಹಿಂದ ಚಳುವಳಿಯಲ್ಲಿದ್ರು, ಅವರಿಗೆ ಆ ಬದ್ಧತೆ ಇದೆ ಅಂತ ಹೇಳಿರಬಹುದು. ಸಿಎಂ ಹುದ್ದೆಯನ್ನು ದೃಷ್ಟಿಯಲ್ಲಿ ಇಟ್ಕೊಂಡು ಅವರು ಹೇಳಿಲ್ಲ ಎಂದರು.
ಇನ್ನೂ ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಸಂಘದವರೂ ಅನುಮತಿ ಕೇಳಿದ್ದಾರೆ, ಬೇರೆ ಸಂಘಟನೆಗಳೂ ಕೇಳಿದ್ದಾರೆ. ಸ್ಥಳೀಯ ಆಡಳಿತ ಸುತ್ತೋಲೆ ಆಧರಿಸಿ ತೀರ್ಮಾನ ತಗೊಳ್ಳುತ್ತೆ. ನಮ್ಮ ಸುತ್ತೋಲೆಯಲ್ಲಿ ಎಲ್ಲೂ ಆರ್ಎಸ್ಎಸ್ ಅನ್ನುವ ಶಬ್ಧ ಬಂದಿಲ್ಲ. ನಾವು ಆರ್ಎಸ್ಎಸ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಆದೇಶ ಮಾಡಿಲ್ಲ. ಇದು ಎಲ್ಲರಿಗೂ ಅನ್ವಯ ಆಗುತ್ತೆ ಎಂದರು.



