ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ವಾರ್ಡ್ ನಂ. 35ರಲ್ಲಿ ನೀಲಮ್ಮ ತಾಯಿ ಮಠದ ಹತ್ತಿರ ಸಿ.ಸಿ ರಸ್ತೆ ಕಾಮಗಾರಿಯ ಭೂಮಿಪೂಜೆಯನ್ನು ಮಂಗಳವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ನೆರವೇರಿಸಿದರು.
ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.



