ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನವೆಂಬರ್ 8ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸರ ಜಯಂತಿ ಹಾಗೂ ನವೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮಗಳನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ತಿಳಿಸಿದ್ದಾರೆ.
ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಗೆ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಜಯಂತಿ ಕಾರ್ಯಕ್ರಮಗಳನ್ನು ಪ್ರತಿವರ್ಷದಂತೆ ಈ ಬಾರಿ ಕೂಡ ವಿಜೃಂಭಣೆಯಿಂದ ಆಚರಿಸೋಣ,” ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣ ಮಾಡಿದರು. ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.



