ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನ. 12ರಂದು ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಅನ್ನದಾನ ವಿಜಯ ಪ್ರೌಢಶಾಲೆಯ ವಿದ್ಯಾರ್ಥಿ ಮಂಗಳೇಶ್ ಗೋಂಧಿ 3000 ಮೀ ಓಟದಲ್ಲಿ ದ್ವಿತೀಯ ಸ್ಥಾನ, ವಿದ್ಯಾರ್ಥಿ ಶ್ರೇಯಸ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕ ಎಂ.ಬಿ. ಸಜ್ಜನರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



