ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕು ಬಿಂಕದಕಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಅಂದಾಜು 25 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ, ತಾರಿಕೊಪ್ಪದವರ ಹೊಲದ ಹತ್ತಿರ 25 ಲಕ್ಷ ರೂಗಳ ವೆಚ್ಚದಲ್ಲಿ ಗಟಾರು ಹಾಗೂ ಸಿ.ಡಿ ನಿರ್ಮಾಣ, 15 ಲಕ್ಷ ರೂಗಳ ವೆಚ್ಚದಲ್ಲಿ ಶಾಂಬರ ರಸ್ತೆಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕಾನೂನು, ಸಂಸದೀಯ ವ್ಯವಹಾರಗಳು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಂದ ಗ್ರಾಮಗಳು ಸುಂದರ ಹಾಗೂ ಅಭಿವೃದ್ಧಿ ಪಥದತ್ತ ಸಾಗುವಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಬಿಂಕದಕಟ್ಟಿ ಗ್ರಾಮ ಪಂಚಾಯಿತಿ ಇನ್ನಷ್ಟು ಅಭಿವೃದ್ಧಿಗೊಳ್ಳಲು ಎಲ್ಲರೂ ರಚನಾತ್ಮಕ ಕಾರ್ಯಗಳಲ್ಲಿ ಕೈಜೋಡಿಸುವ ಮೂಲಕ ಗ್ರಾಮದ ಬೆಳವಣಿಗೆಗೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ರವಿ ಮೂಲಿಮನಿ, ಅಪ್ಪಣ್ಣ ಇನಾಮತಿ, ಸಿ.ಬಿ ದೊಡ್ಡಗೌಡ್ರ, ಬಿ.ಆರ್. ದೇವರೆಡ್ಡಿ, ಗ್ರಾ.ಪಂ ಅಧ್ಯಕ್ಷ ನಿಂಗಪ್ಪ ಪರಪ್ಪನವರ, ಉಪಾಧ್ಯಕ್ಷರಾದ ದ್ಯಾಮವ್ವ ಆರಟ್ಟಿ, ಸದಸ್ಯರಾದ ತರದರೆಡ್ಡಿ ರಂಗಪ್ಪನವರ, ಪತ್ತೆಸಾಬ ನದಾಫ್, ವೆಂಕಟೇಶ್ ಕುನಿ, ಮಂಜುನಾಥ ಮಕಳಿ, ಭೀಮವ್ವ ಬೇವಿನಕಟ್ಟಿ, ಲಕ್ಷ್ಮೀ ಮೂಲಿಮನಿ, ತುಳಸ ತಿಮ್ಮನಗೌಡ್ರ, ಜೈಬುನಬಿ ಸೋನೆಖಾನವರ, ಅಶೋಕ ಕರೂರ, ದೇವೇಂದ್ರ ಗೌಡ್ರು ಕರಿಗೌಡ್ರ, ಗಾಯತ್ರಿ ಖಾನಾಪುರ, ಗಂಗವ್ವ ತಡಿಸಿ ಸೇರಿದಂತೆ ಗ್ರಾಮದ ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.



