• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಕಾರ್ಯಕ್ರಮದ ಸುವ್ಯವಸ್ಥೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

Vijaya Sakshi by Vijaya Sakshi
December 11, 2025
in Gadag News
0
ಕಾರ್ಯಕ್ರಮದ ಸುವ್ಯವಸ್ಥೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 13ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣಕ್ಕೆ ಆಗಮಿಸುತ್ತಿದ್ದು, ಸೂಕ್ತ ರೀತಿಯ ಶಿಷ್ಟಾಚಾರ ಪಾಲನೆಯಾಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಈ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಸೆಂಬರ್ 13ರಂದು ಬೆಳಿಗ್ಗೆ 10.20 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.15 ಗಂಟೆಗೆ ಲಕ್ಷ್ಮೇಶ್ವರದ ಶ್ರೀ ಉಮಾ ಪಿ.ಯು. ಕಾಲೇಜು ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸುವರು. ಲಕ್ಷ್ಮೇಶ್ವರದ ಚಂದನ ಎಜ್ಯುಕೇಶನ್ ಸೊಸೈಟಿ ವತಿಯಿಂದ ಆಯೋಜಿಸಿರುವ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮ-2025 ಹಾಗೂ ಬಿ.ಎಸ್. ಪಾಟೀಲ, ಭಾ.ಆ.ಸೇ (ನಿ) ಇವರಿಗೆ 2025ನೇ ಸಾಲಿನ ಪ್ರತಿಷ್ಠಿತ `ಚಂದನಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಜರುಗಿಸುವರು. ಮಧ್ಯಾಹ್ನ 3 ಗಂಟೆಗೆ ಲಕ್ಷ್ಮೇಶ್ವರದ ಶ್ರೀ ಉಮಾ ಪಿ.ಯು. ಕಾಲೇಜು ಮೈದಾನ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ತೆರಳಲಿದ್ದು, ಜಿಲ್ಲೆಗೆ ಆಗಮಿಸಿ ನಿರ್ಗಮಿಸುವವರೆಗೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವಂತೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗಗಳು ಸುವ್ಯವಸ್ಥಿತವಾಗಿ ಇರುವಂತೆ ಹಾಗೂ ವಾಹನ ನಿಲುಗಡೆಗೆ ಸಾಕಷ್ಟು ಸ್ಥಳಾವಕಾಶ ಇರುವಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಸುಸಜ್ಜಿತ ವೈದ್ಯರ ತಂಡ ಇರುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ವೇದಿಕೆ, ಊಟ ಮತ್ತು ವಸತಿ ವ್ಯವಸ್ಥೆ, ಅಗ್ನಿಶಾಮಕ ವ್ಯವಸ್ಥೆ ಕುರಿತು ಚರ್ಚಿಸಿ ಸಂಬಂಧಿತ ಇಲಾಖಾಧಿಕಾರಿಗಳಿಗೆ ಹೊಣೆಗಾರಿಕೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಉಪವಿಭಾಗಾಧಿಕಾರಿ ಗಂಗಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರುಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಸನಾಯಕ, ಜಿ.ಪಂ ಅಧಿಕಾರಿ ಎಂ.ವಿ. ಚಳಗೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕೊಟ್ರೇಶ ವಿಭೂತಿ, ಡಾ. ಬಸವರಾಜ ಮಲ್ಲೂರು, ಎಂ.ಎ. ಟುಂಬರಮಟ್ಟಿ, ಡಾ. ಬಸವರಾಜ ಬಳ್ಳಾರಿ, ಶ್ರೀನಿವಾಸ ಮೂರ್ತಿ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಎಲ್ಲ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಪ್ರಾರಂಭವಾಗುವುದಕ್ಕಿತ ಮುಂಚೆಯೇ ಕಡ್ಡಾಯವಾಗಿ ಹಾಜರಾಗಬೇಕು. ಮುಖ್ಯಮಂತ್ರಿಗಳ ಕಾರ್ಯಕ್ರಮದ ಸ್ಥಳದ ಸ್ವಚ್ಛತೆಗೆ ಹಾಗೂ ಸೂಕ್ತ ಬಂದೋಬಸ್ತ್ಗಾಗಿ ಕ್ರಮ ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಆಸನದ ವ್ಯವಸ್ಥೆ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಬೇಕು. ಒಟ್ಟಾರೆಯಾಗಿ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಇಲಾಖಾಧಿಕಾರಿಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಡಿಸಿ ಸಿ.ಎನ್. ಶ್ರೀಧರ್ ತಿಳಿಸಿದರು.

Tags: BreakingNewsgadagnewsKarnatakaVijayasakshivijayasakshinews
Previous Post

ರಾಜ್ಯದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಣೆ: ಸಂತೋಷ್ ಲಾಡ್

Next Post

ಸಿಎಂ ಸಿದ್ದರಾಮಯ್ಯ ಗದಗ ಜಿಲ್ಲಾ ಪ್ರವಾಸ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
q

ಸಿಎಂ ಸಿದ್ದರಾಮಯ್ಯ ಗದಗ ಜಿಲ್ಲಾ ಪ್ರವಾಸ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

October 22, 2026
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

October 22, 2026
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper