ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯದ ವಿವಿಧ ಜೈಲುಗಳಲ್ಲಿ 36 ಗಂಟೆಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಕೈದಿಗಳ ಬಳಿ ಮೊಬೈಲ್ ಫೋನ್‌ಗಳು, ಚಾಕು, ಮಾದಕ ಪದಾರ್ಥಗಳು ಪತ್ತೆಯಾಗಿವೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 6 ಮೊಬೈಲ್ ಫೋನ್‌ಗಳು ಮತ್ತು 4 ಚಾಕುಗಳು ವಶಪಡಿಸಲಾಗಿದ್ದರೆ, ಮೈಸೂರಿನಲ್ಲಿ 9 ಫೋನ್‌ಗಳು ಮತ್ತು 11 ಸಿಮ್ ಕಾರ್ಡ್‌ಗಳು ಪತ್ತೆಯಾದವು.
ಬೆಳಗಾವಿಯಲ್ಲಿ 4 ಫೋನ್‌ಗಳು ಮತ್ತು ದಾಳಿ ವೇಳೆ ಹೊರಗೆ ಎಸೆಯಲ್ಪಟ್ಟಿದ್ದ 366 ಗ್ರಾಂ ಗಾಂಜಾ ವಶಪಡಿಸಲಾಗಿದೆ. ವಿಜಯಪುರದಲ್ಲಿ 1 ಫೋನ್ ಪತ್ತೆಯಾಗಿದ್ದು, ಮಂಗಳೂರಿನಲ್ಲಿ 4 ಫೋನ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಾರ್ಯಾಚರಣೆ ಮೂಲಕ ರಾಜ್ಯದ ಜೈಲುಗಳಲ್ಲಿ ಭದ್ರತೆ ಹೆಚ್ಚಿಸಲು ಹಾಗೂ ಅಕ್ರಮ ವಸ್ತುಗಳ ಪ್ರವೇಶ ತಡೆಯಲು ಸರ್ಕಾರ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



