ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಹಗರಿಬೊಮ್ಮನಹಳ್ಳಿ ಬಿಜೆಪಿ ಮಂಡಲ ಅಧ್ಯಕ್ಷರಾದ ಬೆಣಕಲ್ ಪ್ರಕಾಶ್ ಕೆ.ಎಸ್. ಆರೋಪಿಸಿದ್ದಾರೆ.
ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಾದ ಪ್ರಮುಖ ಯೋಜನೆಗಳು ಹಾಗೂ ಅನುದಾನಗಳನ್ನು ಬಜೆಟ್ನಲ್ಲಿ ಒದಗಿಸಿಲ್ಲದಿರುವುದು ಜನರಲ್ಲಿ ನಿರಾಶೆ ಉಂಟುಮಾಡಿದೆ ಎಂದು ಅವರು ಹೇಳಿದರು.
ಈ ಕುರಿತು ವಿಜಯಸಾಕ್ಷಿ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರವು ಮುಂದಿನ ದಿನಗಳಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿ ಅಗತ್ಯ ಅನುದಾನ ಹಾಗೂ ಯೋಜನೆಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.



