ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರದ ನಿವಾಸಿ ಲೋಕೇಶ್ (45) ಮೃತ ದುರ್ಧೈವಿಯಾಗಿದ್ದು, ಅವರು ಹಾಸನದ ಗುಡ್ಡೇನಹಳ್ಳಿಯಲ್ಲಿ ಇರುವ ಎರಡು ಹಾಸ್ಟೆಲ್‌ಗಳಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಮ್ಯಾನೇಜರ್ ಹುದ್ದೆಗೆ ಬಡ್ತಿ ಹೊಂದಿದ್ದರು. ನಂತರ ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶನಿವಾರ ರಾತ್ರಿ ದಾಸರಕೊಪ್ಪಲಿನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾಸನ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



