ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಗೌರಿಪುರದಲ್ಲಿ ಮೇಲಾಧಿಕಾರಿಯ ಮಾನಸಿಕ ಕಿರುಕುಳ ಹಿನ್ನೆಲೆ ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ರಾಜು ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆ ನೌಕರ. ಮೂರು ಪುಟಗಳ ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ ರಾಜು ಅವರು ಕೃಷಿ ಇಲಾಖೆಯ ಅಧಿಕಾರಿ ರಾಘವೇಂದ್ರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಘಟನೆ ಬಗ್ಗೆ ಮೃತ ರಾಜು ಪತ್ನಿ ಪ್ರೇಮಾ ಮಾತನಾಡಿ, “ರಾಘವೇಂದ್ರ ಅವರು ನನ್ನ ಗಂಡನನ್ನು ಕೆಲಸಕ್ಕೆ ಸೇರಿಸಿಕೊಂಡಾಗಿನಿಂದ ಮಾನಸಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಕಳೆದ ನಾಲ್ಕು ತಿಂಗಳುಗಳಿಂದ ಸಂಬಳವೂ ನೀಡಿಲ್ಲ ಎಂದು ಆರೋಪಿಸಿದ್ದಾರೆ. ನನ್ನ ಗಂಡನ ಸಾವಿಗೆ ನ್ಯಾಯ ಒದಗಿಸಬೇಕೆಂದು ಕಣ್ಣೀರು ಹಾಕಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.



