HomeGadag Newsಎಸ್ಸಿ-ಎಸ್ಟಿ ಸಮುದಾಯಗಳ ಮಾರಾಮಾರಿ ಕೇಸ್: 21ಜನ ವಶಕ್ಕೆ, ಗ್ರಾಮದಲ್ಲಿ ಆತಂಕದ ಛಾಯೆ!

ಎಸ್ಸಿ-ಎಸ್ಟಿ ಸಮುದಾಯಗಳ ಮಾರಾಮಾರಿ ಕೇಸ್: 21ಜನ ವಶಕ್ಕೆ, ಗ್ರಾಮದಲ್ಲಿ ಆತಂಕದ ಛಾಯೆ!

For Dai;y Updates Join Our whatsapp Group

Spread the love

ಗದಗ:- ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಕ್ಷುಲ್ಲಕ ನೀರಿನ ವಿಚಾರಕ್ಕೆ ಕಿರಿಕ್ ಉಂಟಾಗಿ ಎಸ್ಸಿ-ಎಸ್ಟಿ ಸಮುದಾಯಗಳ ನಡುವೆ ಭೀಕರ ಮಾರಾಮಾರಿ ನಡೆದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಸೋಮವಾರ ಜರುಗಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಒಟ್ಟು 33 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಮುಂಡರಗಿ ತಾಲೂಕು ಆಸ್ಪತ್ರೆ ಮತ್ತು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬೆನ್ನಲ್ಲೇ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಭಾರೀ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಎಸ್, ಸೋಮವಾರ ಸಂಜೆ, ಎಸ್ಸಿ ಸಮುದಾಯದ ಯುವಕನೋರ್ವ, ಎಸ್ಟಿ ಸಮುದಾಯದ ಜಮೀನಿನಲ್ಲಿರುವ ಬೋರ್‌ವೆಲ್ ಬಳಿ ನೀರು ಕುಡಿಯಲು ತೆರಳಿದ ವೇಳೆ ಮಾತಿನ ಚಕಮಕಿ ಉಂಟಾಗಿದೆ. ಈ ಸಣ್ಣ ಗಲಾಟೆ ಕೆಲವೇ ಕ್ಷಣಗಳಲ್ಲಿ ತೀವ್ರ ಸ್ವರೂಪ ಪಡೆದು ಎರಡು ಸಮುದಾಯಗಳ ನಡುವೆ ಕಿಚ್ಚನ್ನು ಹಬ್ಬಿಸಿದೆ. ಅಲ್ಲದೇ ಗಲಾಟೆಯಲ್ಲಿ ಜನರು, ಪರಸ್ಪರ ಕಲ್ಲು ತೂರಾಟ, ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯಿಂದಾಗಿ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇನ್ನೂ ಘರ್ಷಣೆಯಲ್ಲಿ ಗಾಯಗೊಂಡ ಎಸ್ಟಿ ಸಮುದಾಯದ 9 ಜನರು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಎಸ್ಸಿ ಸಮುದಾಯದ 24 ಜನರು ಚಿಕಿತ್ಸೆ ಪಡೆಯುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನೂ ಗಾಯಾಳುಗಳನ್ನು ನೋಡಲು ಆಸ್ಪತ್ರೆಗೆ ಭೇಟಿ ನೀಡಿದವರ ಮನಸ್ಸು ಮರುಕ ಹುಟ್ಟುವಂತೆ ಮಾಡಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಗದಗ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಜೊತೆಗೆ ಘಟನೆಯ ಕುರಿತು ಸಮಾಜ ಕಲ್ಯಾಣ ಇಲಾಖೆಗೆ ಸವಿಸ್ತಾರ ವರದಿ ಸಲ್ಲಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣ ವರದಿ ಕೇಳಿದೆ.

ಘಟನೆ ಬಳಿಕ ಚಿಕ್ಕವಡ್ಡಟ್ಟಿ ಗ್ರಾಮವು ಬೂದಿ ಮುಚ್ಚಿದ ಕೆಂಡದಂತಿದ್ದು, ಯಾವುದೇ ಅನಾಹುತ ಸಂಭವಿಸದಿರಲು ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಿ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಗ್ರಾಮದಲ್ಲಿ ಪೊಲೀಸರು ಸತತ ಗಸ್ತು ತಿರುಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಡಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದ್ದು, ಪ್ರಕರಣ ಸಂಬಂಧ 21 ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧನ ಭೀತಿಯಿಂದ ಕೆಲ ಯುವಕರು ಗ್ರಾಮ ತೊರೆದು ಹೋಗಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ. ಇನ್ನೂ ಕೆಲ ಶಂಕಿತರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಘಟನೆ ಬಗ್ಗೆ ಗದುಗಿನ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, “ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದ ಈ ಘರ್ಷಣೆ ಪ್ರಕರಣದಲ್ಲಿ ಎರಡು ಕಡೆಯಿಂದ ದೂರು ದಾಖಲಾಗಿದ್ದು, ಈಗಾಗಲೇ 21 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹಳೆ ವೈಷಮ್ಯ ಹಾಗೂ ನೀರಿನ ವಿಚಾರವೇ ಈ ಗಲಾಟೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಸವಿಸ್ತಾರ ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!