ಬೆಳಗಾವಿ: ಜಿಲ್ಲೆ ಹುಕ್ಕೇರಿ ತಾಲೂಕಿನ ಹಳೆಗುಡಗನಟ್ಟಿ ಗ್ರಾಮದ ಬಳಿಯ ಹಿಡಕಲ್ ಡ್ಯಾಮ್ನ ಹಿನ್ನೀರಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾದ ಘಟನೆ ಜರುಗಿದೆ.
14 ವರ್ಷದ ಕೃಷ್ಣಾ ಖಾನಾಪುರಿ, 13 ವರ್ಷದ ಪ್ರಜ್ವಲ್ ಗೋಕಾರ್ ಮೃತ ಬಾಲಕರು.
ಹಿಡಕಲ್ ಜಲಾಶಯ ಹಿನ್ನೀರಿನಲ್ಲಿ ಬಾಲಕರು ಈಜುಲು ತೆರಳಿದ್ದರು. ಈ ವೇಳೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರ ಶವಗಳನ್ನ ಸ್ಥಳೀಯರು ಮತ್ತು ಪೊಲೀಸರು ಹೊರತೆಗೆದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.



