HomeCrime Newsಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

For Dai;y Updates Join Our whatsapp Group

Spread the love

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮಾರ್ಚ್ 11ರಂದು ಈ ಘಟನೆ ನಡೆದಿದೆ. ಮನೋಹರ್ ಎಂಬ ಆರೋಪಿ, ಯುವತಿಯ ಮನೆಯಲ್ಲಿ ಬಲವಂತವಾಗಿ ತನ್ನ ಹೆಚ್‌ಐವಿ ಸೋಂಕಿತ ರಕ್ತವನ್ನು ಇಂಜೆಕ್ಟ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿ ಮದುವೆಗೆ ನಿರಾಕರಿಸಿದ್ದುದರಿಂದ ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಆರೋಪಿ ಮತ್ತು ಯುವತಿ ಸಂಬಂಧಿಕರಾಗಿದ್ದು, ಇಬ್ಬರ ಮದುವೆ ಮಾಡಲು ಕುಟುಂಬಗಳು ಮೊದಲು ಯೋಚಿಸಿದ್ದವು. ಆದರೆ ಆರೋಪಿಯ ಪೋಷಕರು ಹೆಚ್‌ಐವಿ ಪೀಡಿತರಾಗಿದ್ದ ಹಿನ್ನೆಲೆಯಲ್ಲಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಯುವತಿಯ ಕುಟುಂಬವು ಆತನಿಗೆ ಪರೀಕ್ಷೆ ನಡೆಸಿಸಿತ್ತು. ಪರೀಕ್ಷೆಯಲ್ಲಿ ಆತನು ಕೂಡ ಸೋಂಕಿತನಾಗಿರುವುದು ದೃಢಪಟ್ಟ ನಂತರ ಯುವತಿ ಮದುವೆಯನ್ನು ರದ್ದುಪಡಿಸಿದ್ದಳು.

ಇದರಿಂದ ಕೋಪಗೊಂಡ ಆರೋಪಿ ಯುವತಿಗೆ ಇಂಜೆಕ್ಷನ್ ನೀಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಘಟನೆ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯಿಂದ ಮಾನಸಿಕವಾಗಿ ತೀವ್ರವಾಗಿ ಕುಗ್ಗಿದ್ದ ಯುವತಿ, ಸುಮಾರು ಒಂದು ತಿಂಗಳ ನಂತರ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಭಯ, ಸಾಮಾಜಿಕ ಕಳಂಕ ಹಾಗೂ ಮಾನಸಿಕ ಆಘಾತದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!