ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 15, 18 ಹಾಗೂ 24ರಂದು ಐಪಿಎಲ್ ಪಂದ್ಯಗಳು ನಡೆಯಲಿವೆ. ಈ ಹಿನ್ನೆಲೆ ನಮ್ಮ ಮೆಟ್ರೋ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ.
ಏಪ್ರಿಲ್ 15 ಮತ್ತು 24ರಂದು ಪಂದ್ಯಾವಳಿ ಹಿನ್ನೆಲೆ ಮೆಟ್ರೋ ಸೇವೆಯನ್ನು ರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ವೈಟ್ಫೀಲ್ಡ್ (ಕಾಡುಗೋಡಿ) ನಿಂದ ರಾತ್ರಿ 12:30ಕ್ಕೆ, ಚಲ್ಲಘಟ್ಟದಿಂದ ರಾತ್ರಿ 12:45ಕ್ಕೆ ರೈಲುಗಳು ಹೊರಡಲಿವೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ ರಾತ್ರಿ 12:45ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 12:30ಕ್ಕೆ ಮತ್ತು ಆರ್.ವಿ ರಸ್ತೆದಿಂದ ರಾತ್ರಿ 2:00ಕ್ಕೆ ಕೊನೆಯ ರೈಲು ಸಂಚರಿಸಲಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್)ದಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 1:30ಕ್ಕೆ ಕೊನೆಯ ರೈಲು ಹೊರಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಏಪ್ರಿಲ್ 18ರಂದು ನಡೆಯಲಿರುವ ಪಂದ್ಯದ ದಿನ ಯಾವುದೇ ಸಮಯ ವಿಸ್ತರಣೆ ಇರುವುದಿಲ್ಲ. ಮೆಟ್ರೋ ರೈಲುಗಳು ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿವೆ ಎಂದು ಸ್ಪಷ್ಟಪಡಿಸಲಾಗಿದೆ.



