HomeKarnataka Newsಆದಿಚುಂಚನಗಿರಿ ಮಠವು ಆಧ್ಯಾತ್ಮಿಕ ಪರಂಪರೆ ಮತ್ತು ನೈತಿಕ ಮೌಲ್ಯಗಳ ದಾರಿದೀಪ: ಪ್ರಧಾನಿ ಮೋದಿ

ಆದಿಚುಂಚನಗಿರಿ ಮಠವು ಆಧ್ಯಾತ್ಮಿಕ ಪರಂಪರೆ ಮತ್ತು ನೈತಿಕ ಮೌಲ್ಯಗಳ ದಾರಿದೀಪ: ಪ್ರಧಾನಿ ಮೋದಿ

For Dai;y Updates Join Our whatsapp Group

Spread the love

ಮಂಡ್ಯ: ಆದಿಚುಂಚನಗಿರಿ ಮಠವು ಆಧ್ಯಾತ್ಮಿಕ ಪರಂಪರೆ ಮತ್ತು ನೈತಿಕ ಮೌಲ್ಯಗಳ ದಾರಿದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲೇ ಭಾಷಣ ಆರಂಭಿಸಿ ಕರ್ನಾಟಕದ ಎಲ್ಲಾ ಸಹೋದರರು ಹಾಗೂ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಹೇಳಿದರು.

ಕಾಲಭೈರವೇಶ್ವರನ ದರ್ಶನ ಪಡೆದು, ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿರುವುದು ನನಗೆ ಅಪಾರ ಸಂತೋಷ ತಂದಿದೆ. ಈ ಅನುಭವವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರತೀ ಬಾರಿ ಕರ್ನಾಟಕಕ್ಕೆ ಬಂದಾಗ ಹೊಸ ಪ್ರೇರಣೆ ದೊರೆಯುತ್ತದೆ ಎಂದು ಅವರು ಹೇಳಿದರು.

ಆದಿಚುಂಚನಗಿರಿ ಮಠದಂತಹ ಆಧ್ಯಾತ್ಮಿಕ ಕೇಂದ್ರಗಳು ಸಮಾಜಕ್ಕೆ ದಾರಿದೀಪವಾಗಿವೆ. “ಜಗತ್ತಿನಲ್ಲಿ ಇಂತಹ ಶ್ರೀಮಂತ ಪರಂಪರೆ ಎಲ್ಲೂ ಇಲ್ಲ. ಇಲ್ಲಿ ಪರಂಪರೆ ನಿರಂತರವಾಗಿ ಮುಂದುವರಿದಿದೆ. ಬಾಲಗಂಗಾಧರನಾಥ ಸ್ವಾಮೀಜಿಯವರಂತಹ ಮಹಾತ್ಮರು ಈ ಮಣ್ಣಿನಲ್ಲಿ ಹುಟ್ಟಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿ ಆ ಪರಂಪರೆಯನ್ನು ಯಶಸ್ವಿಯಾಗಿ ಮುಂದುವರೆಸುತ್ತಿದ್ದಾರೆ ಎಂದು ಮೋದಿ ಪ್ರಶಂಸಿಸಿದರು.

ಸ್ವಾಮೀಜಿಗಳು ದೇಹತಃ ನಮ್ಮೊಂದಿಗೆ ಇರದಿದ್ದರೂ ಅವರ ಆಶೀರ್ವಾದ ಸದಾ ನಮ್ಮೊಂದಿಗಿದೆ. ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸಿದ್ದಾರೆ. ನಮ್ಮ ಸರ್ಕಾರವೂ ಇದೇ ದೃಷ್ಟಿಯಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಮಠದ ಕಾರ್ಯಗಳ ಬಗ್ಗೆ ಮಾತನಾಡಿದ ಅವರು, “ಇದು ಕೇವಲ ಮಾನವರ ಅಭಿವೃದ್ಧಿಗೆ ಮಾತ್ರವಲ್ಲ, ಜೀವ ಸಂಕುಲದ ರಕ್ಷಣೆಯಲ್ಲಿಯೂ ತೊಡಗಿದೆ. ನವಿಲಿನ ಸಂರಕ್ಷಣೆ ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡುತ್ತಿದೆ,” ಎಂದು ಹೇಳಿದರು.

ಭೈರವೈಕ್ಯ ಮಂದಿರವು ಕೇವಲ ಕಟ್ಟಡವಲ್ಲ, ಭಾವನೆಗಳ ಸಾಕಾರ. ಇದು ಸೇವೆ, ಸಾಧನೆ ಮತ್ತು ಪ್ರೇರಣೆಯ ಕೇಂದ್ರವಾಗಿದೆ. ಇಲ್ಲಿ ಅನ್ನ, ಅಕ್ಷರ, ಆರೋಗ್ಯ, ಅರಣ್ಯ, ಆಕಳು, ಅನುಗ್ರಹ ಮತ್ತು ಅನುಕಂಪ ಎಂಬ ಮೌಲ್ಯಗಳ ಆಧಾರದ ಮೇಲೆ ಕಾರ್ಯ ನಡೆಯುತ್ತಿದೆ. ಇವುಗಳನ್ನು ಮುಂದುವರಿಸಲು ನಾವು ಎಲ್ಲರೂ ಸಾಮೂಹಿಕ ಸಂಕಲ್ಪ ಮಾಡಬೇಕು,” ಎಂದು ಕರೆ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!