ಬಾಗಲಕೋಟೆ: ಬಾಗಲಕೋಟೆ ಸೆಕ್ಟರ್ ನಂಬರ್ 48ರಲ್ಲಿ ಯುವತಿಯೊಬ್ಬಳು ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತಳನ್ನು 19 ವರ್ಷದ ಭೂಮಿಕಾ ತಿಪ್ಪಣ್ಣವರ್ ಎಂದು ಗುರುತಿಸಲಾಗಿದೆ. ಭೂಮಿಕಾ ಟಯರ್ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಮಾಹಿತಿಯ ಪ್ರಕಾರ, ಕಳೆದ ಎರಡು ವರ್ಷಗಳಿಂದ ಭೂಮಿಕಾ ಮತ್ತು ಟಾಂಟಾಂ ಚಾಲಕ ಡೊಂಗ್ರಿಸಾಬ್ ನದಾಫ್ ನಡುವೆ ಪ್ರೇಮ ಸಂಬಂಧ ಇತ್ತು ಎನ್ನಲಾಗಿದೆ. ಈ ಸಂಬಂಧಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದು, ನದಾಫ್‌ಗೆ ಮನೆಗೆ ಬಂದು ಮಾತನಾಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದ್ದರು.
ಇಂದು ಭೂಮಿಕಾ ಮನೆಯ ಮೇಲ್ಛಾವಣಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ಕುಟುಂಬಸ್ಥರು ಡೊಂಗ್ರಿಸಾಬ್ ನದಾಫ್ ವಿರುದ್ಧ ಆರೋಪ ಮಾಡಿದ್ದಾರೆ. ಘಟನೆಯ ಸಂಬಂಧ
ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.



